ಬಂಧನ 
ದೇಶ

ಗ್ಯಾಂಗ್‍ರೇಪ್ ಸಂತ್ರಸ್ತೆ ಆತ್ಮಹತ್ಯೆ: ತನಿಖಾಧಿಕಾರಿ ಅಮಾನತು, 5 ಬಂಧನ

ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಐವರು...

ಬಾಗ್ಪತ್(ಉತ್ತರಪ್ರದೇಶ): ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. 
ಸಾಮೂಹಿಕ ಅತ್ಯಾಚಾರ ನಂತರ ಆರೋಪಿಗಳು ಅತ್ಯಾಚಾರ ಸಂತ್ರಸ್ತ್ರೆಗೆ ಬೆದರಿಕೆ ಹಾಕಿದ್ದರಿಂದ ಹೆದರಿದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು. ಈ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಪ್ರಕರಣ ತನಿಖೆ ನಡೆಸುತ್ತಿದ್ದ ತನಿಖಾಧಿಕಾರಿಯನ್ನು ಅಮಾನತು ಮಾಡಲಾಗಿದೆ. 
ಜುಲೈ ತಿಂಗಳಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧರು ಅತ್ಯಾಚಾರ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಮತ್ತೆ ಬಾಲಕಿ ಬೆದರಿಕೆ ಹಾಕಿದ್ದು ದೂರನ್ನು ವಾಪಸ್ ಪಡೆಯದಿದ್ದರೆ ಮತ್ತೇ ಸಾಮೂಹಿಕ ಅತ್ಯಾಚಾರ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ ಈ ಹಿನ್ನೆಲೆಯಲ್ಲಿ ಶನಿವಾರ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು. 
ಜುಲೈನಲ್ಲಿ ಪ್ರಕರಣ ದಾಖಲಾಗಿದ್ದು ನಾವು ವೈದ್ಯಕೀಯ ವರದಿ ಆಧರಿಸಿ ಐವರನ್ನು ಬಂಧಿಸಿದ್ದು ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸುವುದಾಗಿ ಬಾಗ್ಪಾತ್ ಪೊಲೀಸ್ ವರಿಷ್ಠಾಧಿಕಾರಿ ಜೈ ಪ್ರಕಾಶ್ ಹೇಳಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT