ಶಿವಸೇನೆ ಬೆಂಬಲಿಗರು (ಸಂಗ್ರಹ ಚಿತ್ರ) 
ದೇಶ

ಸಾಮಾಜಿಕ ಮಾಧ್ಯಮದಲ್ಲಿನ ಟೀಕೆಗಳ ಬಗ್ಗೆ ಬಿಜೆಪಿಗೆ ಅಸಹನೆ: ಶಿವಸೇನೆ

ತನ್ನ ಮಿತ್ರ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಶಿವಸೇನೆ, ಸಾಮಾಜಿಕ ಮಾಧ್ಯಮದಲ್ಲಿನ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿ ಕೇಸರಿ ಪಡೆಗೆ ಇಲ್ಲ....

ಮುಂಬೈ: ತನ್ನ ಮಿತ್ರ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಶಿವಸೇನೆ, ಸಾಮಾಜಿಕ ಮಾಧ್ಯಮದಲ್ಲಿನ ಟೀಕೆಗಳನ್ನು ಸಹಿಸಿಕೊಳ್ಳುವ ಶಕ್ತಿ ಕೇಸರಿ ಪಡೆಗೆ ಇಲ್ಲ ಎಂದಿದೆ.
ಬಿಜೆಪಿ ಸಾಮಾಜಿಕ ಮಾಧ್ಯಮದಲ್ಲಿನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿಯಂತ್ರಿಸಲು ಯತ್ನಿಸುತ್ತಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅವರನ್ನೂ ಸಾಮಾಜಿಕ ಮಾಧ್ಯಮದಲ್ಲಿ ಹೀಗೆಯೇ ಟಾರ್ಗೆಟ್ ಮಾಡಲಾಗಿತ್ತು. ಅದನ್ನು ನಿಯಂತ್ರಿಸುವುದಕ್ಕಾಗಿ ಯುಪಿಎ ಸರ್ಕಾರ ಸಾಮಾಜಿಕ ಮಾಧ್ಯಮದಲ್ಲಿ ಅಭಿಪ್ರಾಯಗಳನ್ನು ನಿಯಂತ್ರಿಸುವುದಕ್ಕಾಗಿ ಮಸೂದೆ ಮಂಡಿಸಲು ಮುಂದಾಗಿತ್ತು. ಆದರೆ ಅಂದು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿ ಇಂದು ಅದೇ ಮಸೂದೆಯನ್ನು ಜಾರಿಗೆ ತರಲು ಮುಂದಾಗಿದೆ ಎಂದು ಶಿವಸೇನೆ ತನ್ನ ಮುಖವಾಗಿ ಸಾಮ್ನಾದಲ್ಲಿ ಆರೋಪಿಸಿದೆ.
ಬಿಜೆಪಿ ಬೇರೆಯವರನ್ನು ಹಣಿಯುವುದಕ್ಕಾಗಿ ತಾನು ತೋಡಿದ ಗುಂಡಿಗೆ ಇಂದು ತಾನೇ ಬೀಳುತ್ತಿದೆ. ಪ್ರತಿಪಕ್ಷಗಳ ಮಾನ ಕಳೆಯಲು ಬಿಜೆಪಿ ಬಳಿಸಿದ್ದ ಸಾಮಾಜಿಕ ಮಾಧ್ಯಮ ಈಗ ಅವರಿಗೆ ತಿರುಗುಬಾಣವಾಗಿದೆ. ತಮ್ಮ ವಿರುದ್ಧ ಮಾತಾನಾಡುವವ ಯುವಕರನ್ನು ಜೈಲಿಗೆ ತಳ್ಳಲಾಗುತ್ತಿದೆ ಎಂದು ಶಿವಸೇನೆ ವಾಗ್ದಾಳಿ ನಡೆಸಿದೆ.
ಬಿಜೆಪಿ ಅಭಿವ್ಯಕ್ತಿ ಸ್ವಾತಂತ್ರ ನಿಯಂತ್ರಿಸಲು ಕಾನೂನು ತರುತ್ತಿದ್ದು, ಯುವಕರು ಸಾಮಾಜಿಕ ಮಾಧ್ಯಮಗಳನ್ನು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮುನ್ನ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಜೈಲಿಗೆ ಹೋಗಬೇಕಾಗುತ್ತದೆ ಎಂದು ಸಾಮ್ನಾ ಸಂಪಾದಕೀಯದಲ್ಲಿ ಎಚ್ಚರಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!