ಸಾಂದರ್ಭಿಕ ಚಿತ್ರ 
ದೇಶ

ತಿರುಪುರ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ, ನೊಂದ ಪೋಷಕರು ಆತ್ಮಹತ್ಯೆಗೆ ಶರಣು

16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅಕೆಯ ಸ್ನೇಹಿತನೇ ಆತ್ಯಾಚಾರ ಎಸಗಿದ್ದು, ಘಟನೆಯಿಂದ ತೀವ್ರವಾಗಿ ನೊಂದಿದ್ದ...

ತಿರುಪುರ: 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅಕೆಯ ಸ್ನೇಹಿತನೇ ಆತ್ಯಾಚಾರ ಎಸಗಿದ್ದು, ಘಟನೆಯಿಂದ ತೀವ್ರವಾಗಿ ನೊಂದಿದ್ದ ಬಾಲಕಿ ತಂದೆ ರಾಜಗೋಪಾಲ್(37) ಹಾಗೂ ತಾಯಿ ಅನಿತಾ(32)(ಹೆಸರು ಬದಲಿಸಲಾಗಿದೆ) ಅವರು ಆತ್ಮಹತ್ಯೆ ಮಾಡಿರೊಂಡಿರುವ ದಾರುಣ ಘಟನೆ ತಿರುಪುರದಲ್ಲಿ ಭಾನುವಾರ ನಡೆದಿದೆ.
ಪುದುಚೇರಿಯ ಕತಿರ್ ಕಂಬಮ್ ನ ರಾಜಗೋಪಾಲ್ ಮತ್ತು ಅನಿತಾ ದಿನಗೂಲಿ ಕಾರ್ಮಿಕರಾಗಿದ್ದು, ದಂಪತಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಮೂವರು ಗಂಡು ಮಕ್ಕಳಿದ್ದಾರೆ. ಈ ಪೈಕಿ ಹಿರಿಯ ಮಗಳು 12ನೇ ತರಗತಿ ವಿದ್ಯಾರ್ಥಿನಿ ಮೇಲೆ ಇತ್ತೀಚಿಗ ಆಕೆಯ ಸ್ನೇಹಿತನೇ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಕುಟುಂಬ ಪುದುಚೇರಿಯ ಕೋರಿಮೆಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಕ್ಸೊ ಕಾಯ್ದೆಯಡಿ ಪ್ರಕರಣದ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಮಧ್ಯೆ ಘಟನೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದ ದಂಪತಿ, ಪುದುಚೇರಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಕೊಡಿಸಿದ ನಂತರ ಒತ್ತಡ ಕಡಿಮೆ ಮಾಡಿಕೊಳ್ಳುವುದಕ್ಕಾಗಿ ದಿಂಡುಗುಲ್, ತಿರುಪುರ ಮತ್ತು ಪಳನಿಗೆ ಪ್ರವಾಸ ಹೋಗಿದ್ದರು. 
ಶುಕ್ರವಾರ ಸಂಜೆ ತಿರುಪುರದಿಂದ ವಾಪಸ್ ಬರುವಾಗ ಧರಮಪುರಂ ರಸ್ತೆಯಲ್ಲಿ ಸಾಫ್ಟ್ ಡ್ರಿಂಕ್ ನೊಂದಿಗೆ ಕೀಟ ನಾಶಕ ಮಿಕ್ಸ್ ಮಾಡಿಕೊಂಡು ಕುಡಿದಿದ್ದಾರೆ. ಸಾಫ್ಟ್ ಡ್ರಿಂಕ್ಸ್ ಕುಡಿತ ಸ್ವಲ್ಪ ಹೊತ್ತಿನಲ್ಲೇ ದಂಪತಿ ಅಸ್ವಸ್ಥಗೊಂಡು ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ಈ ವೇಳೆ ಬಾಲಕಿ ಸಹಾಯಕ್ಕಾಗಿ ಕೂಗಿಕೊಂಡಿದ್ದು, ಕೂಡಲೇ ಅವರನ್ನು 108 ಆಂಬುಲೆನ್ಸ್ ಮೂಲಕ ತಿರುಪುರ ಸರ್ಕಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾಜಗೋಪಾಲ್ ಮತ್ತು ಅನಿತಾ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT