ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ: ಪಾಕಿಸ್ತಾನ ರಾಷ್ಟ್ರದೊಂದಿಗೆ ಅಮೆರಿಕ ಸಂಬಂಧ ಸುಧಾರಣೆಗೆ ಕ್ರಮ ಕೈಗೊಂಡಿದ್ದೇವೆ. ಪಾಕಿಸ್ತಾನದ ನೆರವಿದೆ ನಾವು ಧನ್ಯವಾದಗಳನ್ನು ಸಲ್ಲಿಸುತ್ತೇವೆಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವೀಟ್ ಕುರಿತಂತೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು, ಟ್ರಂಪ್ ಅವರಿಗೆ ಮತ್ತೊಂದು ಅಪ್ಪುಗೆ ಬೇಕೆಂದು ಕಾಣಿಸುತ್ತದೆ ಎಂದು ಭಾನುವಾರ ಹೇಳಿದ್ದಾರೆ.
ಟ್ರಂಪ್ ಅವರ ಟ್ವೀಟ್ ಕುರಿತಂತೆ ಪ್ರಧಾನಿ ಮೋದಿಯವರಿಗೆ ಟಾಂಗ್ ನೀಡಿರುವ ರಾಹುಲ್ ಗಾಂಧಿಯವರು, ಪ್ರಧಾನಿ ಮೋದಿಯವರೇ....ಬೇಗ ಟ್ರಂಪ್ ಅವರನ್ನು ಅಪ್ಪಿಕೊಳ್ಳಿ... ಅವರು ನಿಮ್ಮ ಅಪ್ಪುಗೆಗೆ ಕಾದಿದ್ದಾರೆಂದು ಹೇಳಿದ್ದಾರೆ.
ಪಾಕಿಸ್ತಾನದಲ್ಲಿ ಉಗ್ರರ ಕಪಿಮುಷ್ಟಿಯಲ್ಲಿ ಸಿಲುಕಿಕೊಂಡಿದ್ದ ಕೆನಡಾದ ಕುಟುಂಬವನ್ನು ಇತ್ತೀಚೆಗಷ್ಟೇ ಪಾಕಿಸ್ತಾನ ಸೇನೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿತ್ತು. ಈ ಕುರಿತಂತೆ ಟ್ರಂಪ್ ಅವರು ಪಾಕಿಸ್ತಾನಕ್ಕೆ ಧನ್ಯವಾದ ಸಲ್ಲಿಸುತ್ತಾ ತಮ್ಮೆರಡು ರಾಷ್ಟ್ರಗಳ ನಡುವಿನ ಸ್ನೇಹವೃದ್ಧಿ ಕುರಿತು ಟ್ವೀಟ್ ಮಾಡಿದ್ದರು.
ಕಳೆದ ಜೂನ್ 26 ರಂದು ಟ್ರಂಪ್ ಅವರನ್ನು ಭೇಟಿ ಮಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಮೆರಿಕ ಅಧ್ಯಕ್ಷನನ್ನು ಅನೇಕ ಬಾರಿ ಆಪ್ಪಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics