ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಹುಲ್ ಗಾಂಧಿಗೆ ವಹಿವಾಟು ಮತ್ತು ಲಾಭದ ನಡುವಿನ ವ್ಯತ್ಯಾಸ ತಿಳಿದಿಲ್ಲ: ಶಾ ತಿರುಗೇಟು

ತಮ್ಮ ಪುತ್ರ ಜಯ್ ಶಾ ತನ್ನ ವ್ಯವಹಾರದಲ್ಲಿ ಯಾವುದೇ ತಪ್ಪು ಮಾಡಿಲ್ಲ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ವಹಿವಾಟು ಮತ್ತು ಲಾಭ ...

ಅಮಿತ್ ಶಾ
Shilpa D
Updated On : 16 Oct 2017, 11:02 am
ಅಹಮದಾಬಾದ್: ತಮ್ಮ ಪುತ್ರ ಜಯ್ ಶಾ ತನ್ನ ವ್ಯವಹಾರದಲ್ಲಿ ಯಾವುದೇ ತಪ್ಪು ಮಾಡಿಲ್ಲ, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ವಹಿವಾಟು ಮತ್ತು ಲಾಭ ನಡುವಿನ ವ್ಯತ್ಯಾಸ ಗೊತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಖಾಸಗಿ ಟಿವಿ ಚಾಲೆನ್ ವೊಂದರಲ್ಲಿ ಮಾತನಾಡಿದ ಅಮಿತ್ ಶಾ, ತಾವು ಕಾನೂನುಬಾಹಿರವಾಗಿ  ವ್ಯವಹಾರ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಜಯ್ ಶಾ 100 ಕೋಟಿ ರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಪ್ರಕರಣದ ಬಗ್ಗೆ ರಾಹುಲ್ ಗಾಂಧಿ ಏನು ಮಾತನಾಡುತ್ತಿದ್ದಾರೆ ಎಂಬುದು ಮುಖ್ಯವಲ್ಲ, ಏಕೆಂದರೇ ಅವರಿಗೆ ವಹಿವಾಟು ಮತ್ತು ಲಾಭದ ವ್ಯತ್ಯಾಸ ಗೊತ್ತಿಲ್ಲ ಎಂದು ಹೇಳಿದ್ದಾರೆ. 
ತಮ್ಮ ಪುತ್ರನನ್ನು ಸಮರ್ಥಿಸಿಕೊಂಡ ಅಮಿತ್ ಶಾ, ಈ ಆರೋಪದ ಬಗ್ಗೆ ಸಾಕ್ಷ್ಯಾಧಾರ ಹೊಂದಿರುವ ಪ್ರತಿಯೊಬ್ಬರು ಕೋರ್ಟ್ ಗೆ ಹೋಗಲು ಅವಕಾಶವಿದೆ ಎಂದು ಹೇಳಿದ್ದಾರೆ, ಯಾವುದೇ ತನಿಖೆಗೆ ಬೇಡಿಕೆಯಿಡಿದೇ ಜಯ್ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

Advertisement

Advertisement

ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ನನ್ನ ಮಗ ಕಮಾಡಿಟಿ ಮಾರ್ಕೆಟ್ ವ್ಯವಹಾರ ನಡೆಸುತ್ತಿದ್ದಾನೆ, ಅದರಲ್ಲಿ ನಷ್ಟ ಕೂಡ ಇರುತ್ತದೆ,  ಎಐಸಿಸಿ ಉಪಾಧ್ಯಕ್ಷರಿಗೆ ಸಾಲ ಮತ್ತು ಕ್ರೆಡಿಟ್ ನಡುವಿನ ವ್ಯತ್ಯಾಸ ಕೂಡ ತಿಳಿದಿಲ್ಲ, ನನ್ನ ಮಗ ಸರ್ಕಾರದೊಂದಿಗೆ ಯಾವುದೇ ಉದ್ಯಮ ನಡೆಸುತ್ತಿಲ್ಲ, ಅಥವಾ ಯಾವುದೇ ಸರ್ಕಾರಿ ಭೂಮಿ ಪಡೆದಿಲ್ಲ, ಗುತ್ತಿಗೆದಾರರ ಜೊತೆ ಯಾವುದೇ ಸಂಪರ್ಕ ಹೊಂದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments