ಸಂಗ್ರಹ ಚಿತ್ರ 
ದೇಶ

8 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಶ್ರೀಲಂಕಾದ ತಲೈಮನ್ನರ್ ಬಳಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ 8 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಮಂಗಳವಾರ ಬಂಧನಕ್ಕೊಳಪಡಿಸಿದೆ...

ರಾಮೇಶ್ವರಂ: ಶ್ರೀಲಂಕಾದ ತಲೈಮನ್ನರ್ ಬಳಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ 8 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಮಂಗಳವಾರ ಬಂಧನಕ್ಕೊಳಪಡಿಸಿದೆ ಎಂದು ತಿಳಿದುಬಂದಿದೆ. 
ಬಂಧನಕ್ಕೊಳಗಾಗಿರುವ 8 ಮಂದಿ ಮೀನುಗಾರರು ತಮಿಳುನಾಡಿನ ರಾಮೇಶ್ವರಂನವರೆಂದು ತಿಳಿದುಬಂದಿದೆ. ಬಂಧಿತ ಮೀನುಗಾರರನ್ನು ತಲೈಮನ್ನರ್ ಜಿಲ್ಲೆಯ ನೌಕಾ ಕೇಂದ್ರ ಬಳಿ ಕರೆದೊಯ್ದು ತನಿಖೆ ನಡೆಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 
ಮೀನುಗಾರರ ಬಂಧನ ಕುರಿತಂತೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ರಾಜ್ಯ ಮಾಹಿತಿ ತಂತ್ರಜ್ಞಾನ ಸಚಿವ ಎಂ. ಮಣಿಕಂದನ್ ಅವರು, ಮೀನುಗಾರರ ಬಂಧನ ವಿಚಾರವನ್ನು ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ಕೇಂದ್ರ ಗಮನಕ್ಕೆ ತರಲಿದೆ ಎಂದು ತಿಳಿಸಿದ್ದಾರೆ. 
ಅ.12 ರಂದು ಶ್ರೀಲಂಕಾ ನೌಕಾಪಡೆ 5 ಭಾರತೀಯ ಮೀನುಗಾರರನ್ನು ಬಂಧನಕ್ಕೊಳಪಡಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!