ಅಗ್ನಿ ಅವಘಡ ಸಂಭವಿಸಿರುವ ಪ್ರಧಾನಮಂತ್ರಿಗಳ ಕಾರ್ಯಾಲಯದತ್ತ ಧಾವಿಸುತ್ತಿರುವ ಅಗ್ನಿಶಾಮಕ ದಳದ ವಾಹನಗಳು
ನವದೆಹಲಿ: ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇಂದು ಮುಂಜಾನೆ 3 ಗಂಟೆ 35 ನಿಮಿಷದ ಸುಮಾರಿಗೆ ಪ್ರಧಾನಮಂತ್ರಿಗಳ ಕಾರ್ಯಾಲಯದ ಕೊಠಡಿ ಸಂಖ್ಯೆ 242ರಲ್ಲಿ ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.
ಬೆಳಿಗ್ಗೆ 3.35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಎರಡನೇ ಮಹಡಿಯಲ್ಲಿರುವ 242ನೇ ಕೊಠಡಿಯಲ್ಲಿ ಅಗ್ನಿ ಅವಘಟ ಸಂಭವಿಸಿತ್ತು. ಕೂಡಲೇ ಸ್ಥಳದಲ್ಲಿದ್ದ ಸಿಬ್ಬಂದಿಗಳು ಅಗ್ನಿಶಾಮಕ ದಳದ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಪ್ರಧಾನಮಂತ್ರಿಗಳ ಕಾರ್ಯಾಲಯದತ್ತ ಧಾವಿಸಿದ್ದವು. ಬಳಿಕ 20 ನಿಮಿಷಗಳಲ್ಲೇ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದರು. ಹೀಗಾಗಿ ಯಾವುದೇ ದೊಡ್ಡಮಟ್ಟದ ಹಾನಿ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಅಗ್ನಿ ಅವಘಡಕ್ಕೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.