ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಹಿಳೆಯರ ಜಡೆಗೆ ಕತ್ತರಿ: ಭದ್ರತಾ ಸಿಬ್ಬಂದಿಯಿಂದ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ, 4 ಗಾಯ

ಜಮ್ಮು ಮತ್ತು ಕಾಶ್ಮೀರದಲ್ಲಿ ನಿಗೂಢವಾಗಿ ಮಹಿಳೆಯರ ಜಡೆಗೆ ಕತ್ತರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಹಲ್ಗಾಮ್ ನಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಭದ್ರತಾ...

ಯೋಧರು
Vishwanath S
Updated On : 18 Oct 2017, 3:19 am
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಿಗೂಢವಾಗಿ ಮಹಿಳೆಯರ ಜಡೆಗೆ ಕತ್ತರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಹಲ್ಗಾಮ್ ನಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಭದ್ರತಾ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. 
ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಸ್ಥಳೀಯರು ಮಹಿಳೆಯರ ಜಡೆಗೆ ಕತ್ತರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಸಿಬ್ಬಂದಿ ವಾಹನ ಘಟನಾ ಸ್ಥಳದ ಕಡೆಯಿಂದ ಬರುತ್ತಿದೆ ಎಂದು ಆರೋಪಿಸಿ ಸ್ಥಳೀಯರ ಗುಂಪು ಭದ್ರತಾ ಸಿಬ್ಬಂದಿ ವಿರುದ್ಧ ಘರ್ಷಣೆಗೆ ಇಳಿದರು ಈ ವೇಳೆ ಭದ್ರತಾ ಸಿಬ್ಬಂದಿಗಳು ಸ್ವಯಂಪ್ರೇರಿತರಾಗಿ ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಮಹಿಳೆಯರ ಜಡೆಗಳಿಗೆ ಕತ್ತರಿ ಹಾಕಲಾಗುತ್ತಿರುವ ಘಟನೆಗಳು ವರದಿಯಾಗುತ್ತಿದ್ದು ಇದರಿಂದ ರೊಚ್ಚಿಗೆದ್ದಿರುವ ಸ್ಥಳೀಯರು ಶಂಕೆಯಿಂದ ಸಿಕ್ಕ ಸಿಕ್ಕವರನ್ನು ಥಳಿಸುತ್ತಿದ್ದು, ನಿನ್ನೆ ಬಿಎಸ್ಎಫ್ ಯೋಧನೊಬ್ಬನ ಮೇಲೆ ಉದ್ರಿಕ್ತ ಸ್ಥಳೀಯರು ನಡುರಸ್ತೆಯಲ್ಲೇ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ವೇಳೆ ಸಹ ಯೋಧರು ಯೋಧನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.  ಆದರೆ ತೀವ್ರವಾಗಿ ಥಳಿತಕ್ಕೊಳಗಾಗಿರುವ ಯೋಧನ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments