ನವದೆಹಲಿ: ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮುಖಂಡ ರವೀಂದರ್ ಗೋಸಾಯ್ ಅವರ ಹತ್ಯೆಯ ಹಂತಕರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಲೂದಿಯಾನದಲ್ಲಿ ನಡೆದ ಆರ್ಎಸ್ಎಸ್ ಮುಖಂಡ ರವಿಂದರ್ ಗೋಸಾಯ್ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹಿಂಸೆಯನ್ನು ಒಪ್ಪಲಾಗದು, ಗೋಯಾಸ್ ಹಂತಕರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಗೋಸಾಯ್ ಅವರನ್ನು ಹತ್ಯೆ ಮಾಡಲು ದುಷ್ಕರ್ಮಿಗಳು ಬಳಸಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಬೆಳಗ್ಗೆ ಲೂದಿಯಾನದ ಕೈಲಾಶ್ ನಗರದಲ್ಲಿ ಅಪರಿಚಿತರು ಬೈಕ್ ನಲ್ಲಿ ಬಂದು ಗೋಸಾಯ್ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದರು. ಗುಂಡೇಟಿನಿಂದಾಗಿ ಗೋಸಾಯ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.