ನವದೆಹಲಿ: ಹರಿಯಾಣ ರಾಜ್ಯದ ಗಾಯಕಿ ಹರ್ಷಿತಾ ದಹಿಯಾ ಅವರನ್ನು ದುಷ್ಕರ್ಮಿಗಳ ತಂಡವೊಂದು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಪಾಣಿಪತ್ ನಲ್ಲಿರುವ ಇಸ್ರಾನಾ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗಾಯಕಿ ಹರ್ಷಿತಾ ದಹಿಯಾ ಅವರು ಕಾರ್ಯಕ್ರಮ ಮುಗಿಸಿ ದೆಹಲಿಯ ನರೇಲಾದಲ್ಲಿರುವ ತಮ್ಮ ನಿವಾಸಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ಗುಂಡಿನ ದಾಳಿ ನಡೆಸಿದೆ ಎಂದು ವರದಿಗಳು ತಿಳಿಸಿವೆ.
ಕಾರಿನಲ್ಲಿ ಬಂದಿರುವ ನಾಲ್ವರು ದುಷ್ಕರ್ಮಿಗಳು ಹರ್ಷತಾ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಹಿಂಬಾಲಿಸಿದ್ದಾರೆ. ಚಾಮ್ರಾರಾ ಬಳಿ ಕಾರು ಬರುತ್ತಿದ್ದಂತೆಯೇ ಅಡ್ಡಗಟ್ಟಿರುವ ದುಷ್ಕರ್ಮಿಗಳು ಗುಂಡಿ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಹರ್ಷಿತಾ ಅವರ ಮೃತದೇಹವನ್ನು ಪಾಣಿಪತ್ ನ ಸಾರ್ವಜನಿಕ ಆಸ್ಪತ್ರೆಯಲ್ಲಿರಿಸಲಾಗಿದೆ. ಹತ್ಯೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.