ಪೂಂಚ್: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಬುಧವಾರ ತಿಳಿದುಬಂದಿದೆ.
ಇಂದು ಬೆಳಿಗ್ಗೆ ಪೂಂಚ್ ಜಿಲ್ಲೆಯ ಬಾಲ್'ಕೋಟ್ ಸೆಕ್ಟರ್ ಹಾಗೂ ರಜೌರಿಯ ಮಂಜ್'ಕೋಟ್ ಸೆಕ್ಟರ್ ಬಳಿ ಪಾಕಿಸ್ತಾನ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಸಣ್ಣ ಹಾಗೂ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಪಾಕಿಸ್ತಾನ ಸೇನೆ ಅಪ್ರಚೋದಿತ ದಾಳಿ ನಡೆಸಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದೆ ಎಂದು ವರದಿಗಳು ತಿಳಿಸಿವೆ.