ಪುಲ್ವಾಮ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿರುವ ಪಿಡಿಪಿ ಶಾಸಕ ಎಜಾಜ್ ಅಹ್ಮದ್ ಮಿರ್ ಅವರ ಮನೆ ಮೇಲೆ ಉಗ್ರರು ದಾಳಿ ನಡೆಸಿದ ಬೆನ್ನಲ್ಲೇ ಪುಲ್ವಾಮ ಜಿಲ್ಲೆಯ ತ್ರಾಲ್ ನಲ್ಲಿ ಮತ್ತೋರ್ವ ಪಿಡಿಪಿ ಶಾಸಕನ ನಿವಾಸದ ಮೇಲೆ ಗ್ರೆನೇಡ್ ದಾಳಿ ನಡೆದಿದೆ.
ಮುಸ್ತಾಕ್ ಷಾ ಅವರ ಮನೆಯ ಮೇಳೆ ಶಂಕಿತ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ದಾಳಿ ನಡೆದ ಸಂದರ್ಭದಲ್ಲಿ ಶಾಸಕರು ಮನೆಯಲ್ಲಿ ಇರಲಿಲ್ಲ, ಗ್ರೆನೇಡ್ ದಾಳಿ ನಡೆಸುವುದರೊಂದಿಗೆ ಶಂಕಿತ ಉಗ್ರರು ಗುಂಡಿನ ದಾಳಿಯನ್ನೂ ನಡೆಸಿದ್ದು, ಭದ್ರತಾ ಸಿಬ್ಬಂದಿಗಳು ಗುಂಡಿನ ದಾಳಿಗೆ ಪ್ರತಿ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಜೀವ ಹಾನಿ ಬಗ್ಗೆ ವರದಿಯಾಗಿಲ್ಲ.
ದಾಳಿ ನಡೆಸಿದವರನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.