ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ರಾಜಿನಾಮೆ!
ಅಚ್ಚರಿಯ ಬೆಳವಣಿಗೆಯಲ್ಲಿ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ: ಅಚ್ಚರಿಯ ಬೆಳವಣಿಗೆಯಲ್ಲಿ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿರುವಂತೆ ಇಂದು ಬೆಳಗ್ಗೆ ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ರಂಜಿತ್ ಕುಮಾರ್ ಅವರು ತಮ್ಮ ಸಾಲಿಸಿಟರ್ ಜನರಲ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ರಾಜಿನಾಮೆಗೆ ತಮ್ಮ ವೈಯುಕ್ತಿಕ ಸಮಸ್ಯೆಗಳೇ ಕಾರಣ ಎಂದು ರಂಜಿತ್ ಕುಮಾರ್ ಹೇಳಿದ್ದಾರೆ ಎಂದು ವರದಿ ಮಾಡಲಾಗಿದೆ.
ಪ್ರಸ್ತುತ ರಂಜಿತ್ ಕುಮಾರ್ ಅವರ ರಾಜಿನಾಮೆಯಿಂದಾಗಿ ತೆರವಾದ ಸ್ಥಾನಕ್ಕೆ ಹಂಗಾಮಿಯಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿರುವ ಚುಷಾರ್ ಮೆಹ್ತಾ ಅವರು ಮುಂದುವರೆಯಲಿದ್ದಾರೆ.
2014ರಲ್ಲಿ ಅಂದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಿರಿಯ ನ್ಯಾಯವಾದಿ ರಂಜಿತ್ ಕುಮಾರ್ ಅವರನ್ನು ಸಾಲಿಸಿಟರ್ ಜನರಲ್ ಆಗಿ ನೇಮಕ ಮಾಡಲಾಗಿತ್ತು. ಪ್ರಮುಖ ಪ್ರಕರಣಗಳಲ್ಲಿ ಕೇಂದ್ರ ಸರ್ಕಾರದ ಪರ ವಾದ ಮಂಡಿಸುತ್ತಿದ್ದ ರಂಜಿತ್ ಕುಮಾರ್ ಅವರು, ಈ ಹಿಂದೆ ಕಾವೇರಿ ವಿವಾದ ಸಂದರ್ಭದಲ್ಲಿಯೂ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದರು.