ಲಾಲೂ ಪ್ರಸಾದ್ ಯಾದವ್ ಕುಟುಂಬ 
ದೇಶ

ಹೋಟೆಲ್ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣ: ತೇಜಸ್ವಿ ಯಾದವ್, ರಾಬ್ರಿ ದೇವಿಗೆ ಸಮನ್ಸ್ ಜಾರಿ

ಹೋಟೆಲ್'ಗಳ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ರೈಲ್ವೇ ಸಚಿವ ಹಾಗೂ ಆರ್'ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾವದ್ ಹಾಗೂ ರಾಬ್ರಿ ದೇವಿಗೆ ಜಾರಿ ನಿರ್ದೇಶನಾಲಯ ಶನಿವಾರ...

ನವದೆಹಲಿ: ಹೋಟೆಲ್'ಗಳ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ರೈಲ್ವೇ ಸಚಿವ ಹಾಗೂ ಆರ್'ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾವದ್ ಹಾಗೂ ರಾಬ್ರಿ ದೇವಿಗೆ ಜಾರಿ ನಿರ್ದೇಶನಾಲಯ ಶನಿವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. 
ಯುಪಿಎ-1 ಸರ್ಕಾರದ ಅವಧಿಯಲ್ಲಿ ರೈಲ್ವೇ ಸಚಿವರಾಗಿದ್ದ ಲಾಲು ಪ್ರಸಾದ್ ಯಾಧವ್ ಅವರ ಅವಧಿಯಲ್ಲಿ ರೈಲ್ವೇ ಹೋಟೆಲ್ ಟೆಂಡರ್ ಹಂಚಿಕೆಯಲ್ಲಿ ಹಗರಣ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನಲೆಯಲ್ಲಿ ಲಾಲೂ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. 
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಲಾಲು ಪುತ್ರ ತೇಜಸ್ವಿ ಹಾಗೂ ರಾಬ್ರಿ ದೇವಿಯವರಿಗೆ ಸಮನ್ಸ್ ಜಾರಿ ಮಾಡಿದ್ದು, ತೇಜಸ್ವಿಯವರು ಅ.24 ಹಾಗೂ ರಾಬ್ರಿಯವರು ಅ.27 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಿದ್ದಾರೆಂದು ತಿಳಿದುಬಂದಿದೆ. 
ಜಾರಿ ನಿರ್ದೇಶನಾಲಯದ ಸಮನ್ಸ್'ನಂತೆ ಈ ಹಿಂದೆ ತೇಜಸ್ವಿ ಯಾದವ್ ಅವರು ವಿಚಾರಣೆಗೆ ಹಾಜರಾಗಿದ್ದರು. 9 ಗಂಟೆಗಳ ಕೇಂದ್ರ ತನಿಖಾಧಿಕಾರಿಗಳು ತೇಜಸ್ವಿ ಯಾದವ್ ಅವರನ್ನು ವಿಚಾರಣೆಗೊಳಪಡಿಸಿದ್ದರು. ಆದರೆ, ರಾಬ್ರಿ ದೇವಿಯವರು ಜಾರಿ ನಿರ್ದೇಶಾನಲಯದ ನಾಲ್ಕು ಸಮನ್ಸ್ ಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಿಲ್ಲ. 
ಹೋಟೆಲ್ ಗಳ ಗುತ್ತಿಗೆಯಲ್ಲಿ ಅಕ್ರಮ ನಡೆಸಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಲಾಲೂ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಇಂಚಿಂಚೂ ಶೋಧ ನಡೆಸಿದ್ದರು. 
ಲಾಲು ಪ್ರಸಾದ್ ಯಾದವ್, ಪತ್ನಿ ರಾಬ್ರಿ ದೇವಿ, ಪುತ್ರ ಬಿಹಾರ ಡಿಸಿಎಂ ತೇಜಸ್ವಿ, ಎಂಡಿ. ಪಿ.ಕೆ. ಗೋಯಲ್, ಲಾಲೂ ಅವರ ಆಪ್ತ ಗೆಳೆಯ ಪ್ರೇಮ್ ಚಂದ್ರ ಗುಪ್ತಾ ಪತ್ನಿ ಸುಜಾತಾ ಮತ್ತಿತರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ ಅಧಿಕಾರಿಗಳು, ಏಕಕಾಲದಲ್ಲಿ ದೆಹಲಿ, ಪಾಟ್ನಾ, ರಾಂಚಿ, ಪುರಿ, ಗುರ್ ಗಾಂವ್ ಸೇರಿದಂತೆ ಒಟ್ಟು 12 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. 
2006ರಲ್ಲಿ ಬಿಎನ್ ಆರ್ ಹೋಟೆಲ್ ಗಳ ನಿರ್ವಹಣೆಗೆ ಸುಜಾತಾ ಹೋಟೆಲ್ ಗಳಿಗೆ ನೀಡಿದ್ದ ಗುತ್ತಿಗಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಲಾಲೂ ಪ್ರಸಾದ್ ವಿರುದ್ದ ಕೇಳಿ ಬಂದಿತ್ತು. ಸುಜಾತಾ ಹೋಟೆಲ್ ಗಳನ್ನು ಐಆರ್ ಸಿಟಿಸಿ ಮತ್ತು ಸಾರ್ವಜನಿಕ ರೈಲ್ವೇ ಇಲಾಖೆ ಪ್ರಸಕ್ತ ವರ್ಷಾರಂಭದಲ್ಲಿ ತನ್ನ ಅಧೀನಕ್ಕೆ ಪಡೆದುಕೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT