ದೇಶ

ಜನಪ್ರತಿನಿಧಿಗಳು ಬಂದರೇ ಎದ್ದು ನಿಲ್ಲಿ: ಉತ್ತರ ಪ್ರದೇಶ ಸರ್ಕಾರದ ಹೊಸ ಆದೇಶ

Shilpa D
ಲಕ್ನೋ:  ರಾಜ್ಯಮಟ್ಟದ ಎಲ್ಲಾ ಅಧಿಕಾರಿಗಳಿಗೆ ಉತ್ತರ ಪ್ರದೇಶ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಯಾವುದೇ ಸಭೆ ಸಮಾರಂಭಗಳಿಗೆ ಶಾಸಕರು, ಸಚಿವರು ಅಥವಾ ಸಂಸದರು ಬಂದಾಗ ಎಲ್ಲ ಸರ್ಕಾರಿ ಅಧಿಕಾರಿಗಳು ಎದ್ದು ನಿಂತು ಗೌರವ ಸೂಚಿಸಬೇಕು ಹಾಗೂ ಅವರನ್ನು ಸ್ವಾಗತಿಸಬೇಕು ಎಂದು ಸೂಚಿಸಿದೆ.
ಅಂತೆಯೇ ಗಣ್ಯ ವ್ಯಕ್ತಿಗಳು ಅಲ್ಲಿಂದ ಮರಳುವಾಗಲೂ ಇದೇ ಮಾದರಿಯನ್ನು ಅನುಸರಿಸಬೇಕು ಎಂದು ಉತ್ತರಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ ಹೊಸ ಆದೇಶ ಹೊರಡಿಸಿದೆ.ಸ್ವತಃ ರಾಜ್ಯ ಮುಖ್ಯ ಕಾರ್ಯದರ್ಶಿ ರಾಜೀವ್‌ ಕುಮಾರ್‌ ಅವರೇ ಜನಪ್ರತಿನಿಧಿಗಳ ಶಿಷ್ಟಾಚಾರದ ಭಾಗವಾಗಿ ಈ ಸೂಚನೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಜೊತೆಗೆ ಶಿಷ್ಟಾಚಾರಗಳನ್ನು ಪಾಲಿಸದೇ ಇದ್ದರೆ ಅಂಥವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಅಧಿಕಾರಿಗಳು ನಮಗೆ ಗೌರವ ಕೊಡುತ್ತಿಲ್ಲ ಎಂದು ಅನೇಕ ಶಾಸಕರು ಹಾಗೂ ಸಂಸದರು ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿಯವರು ಇಂತಹುದೊಂದು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. 
SCROLL FOR NEXT