ದೇಶ

ಪಂಜಾಬ್: 20ಕ್ಕೂ ಕಡಿಮೆ ಮಕ್ಕಳಿರುವ 800 ಸರ್ಕಾರಿ ಶಾಲೆಗಳನ್ನು ಮುಚ್ಚಲಿರುವ ಪಂಜಾಬ್ ಸರ್ಕಾರ

Sumana Upadhyaya
ಚಂಡೀಗಢ: ಬೋಧಕ ಸಿಬ್ಬಂದಿಗಳ ಬಳಕೆ ಗುಣಮಟ್ಟವನ್ನು ಹೆಚ್ಚಿಸಲು ಪಂಜಾಬ್ ಸರ್ಕಾರ, 20ಕ್ಕೂ ಕಡಿಮೆ ವಿದ್ಯಾರ್ಥಿಗಳಿರುವ 800 ಸರ್ಕಾರಿ ಶಾಲೆಗಳನ್ನು ಒಂದು ಕಿಲೋ ಮೀಟರ್ ಗಿಂತ ಕಡಿಮೆ ವಿಸ್ತೀರ್ಣದಲ್ಲಿರುವ ಶಾಲೆಗಳಿಗೆ ಒಗ್ಗೂಡಿಸಲು ನಿರ್ಧರಿಸಿದೆ. 
ರಾಜ್ಯದ ಜಿಲ್ಲೆಗಳಲ್ಲಿರುವ ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ಈ ಸಂಬಂಧ ಶಿಕ್ಷಣ ಇಲಾಖೆ ನಿರ್ದೇಶಕರು ಸೂಚನೆ ಕಳುಹಿಸಿದ್ದು, ಪ್ರಕ್ರಿಯೆಯನ್ನು ಒಂದು ವಾರದೊಳಗೆ ಮುಗಿಸಲು ಸೂಚಿಸಲಾಗಿದೆ. ಈ ಶಾಲೆಗಳಲ್ಲಿ ಕೆಲಸ ಮಾಡುವ ಸುಮಾರು 1600 ಶಿಕ್ಷಕ ಶಿಕ್ಷಕಿಯರನ್ನು ಅಗತ್ಯವಿರುವ ಶಾಲೆಗಳಲ್ಲಿ ನೇಮಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳನ್ನು ಒಗ್ಗೂಡಿಸುವುದು ಮಾತ್ರವಲ್ಲದೆ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಸುಧಾರಿಸಲು ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸಲು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಕೂಡ ಪಂಜಾಬ್ ಸರ್ಕಾರ ನಿರ್ಧರಿಸಿದೆ. ರಾಜ್ಯ ಬಜೆಟ್ ನಲ್ಲಿ ಪ್ರಾಥಮಿಕ ಶಾಲೆಗಳ ಗುಣಮಟ್ಟ ಹೆಚ್ಚಳಕ್ಕೆ ವಿಶೇಷ ಆದ್ಯತೆ ನೀಡಲಿದೆ. 400 ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಕಲಿಯುವ ಆಯ್ಕೆಯನ್ನು ಮಕ್ಕಳಿಗೆ ಸರ್ಕಾರ ಒದಗಿಸಲಿದೆ.
ಆದರೆ ಸರ್ಕಾರಿ ಶಾಲೆಗಳನ್ನು ಒಗ್ಗೂಡಿಸುವ ಸರ್ಕಾರದ ನಿರ್ಧಾರಕ್ಕೆ ಕೆಲವು ವರ್ಗದಿಂದ ವಿರೋಧ ವ್ಯಕ್ತವಾಗಿದೆ.
SCROLL FOR NEXT