ಅನಂತ್'ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಆರ್ವಾನಿ ಬಳಿ ಉಗ್ರರು ನಡೆಸಿದ್ದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ನಾಗರೀಕ ಸಾವನ್ನಪ್ಪಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಅನಂತ್'ನಾಗ್ ಜಿಲ್ಲೆಯ ಆರ್ವಾನಿ ಬಳಿ ನಿನ್ನೆ ಉಗ್ರರು ದಾಳಿ ನಡೆಸಿದ್ದರು. ಈ ವೇಳೆ ಉಗ್ರರ ಗುಂಡಿಗೆ ನಾಗರೀಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ನಾಗರೀಕರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಇದೀಗ ಸಾವನ್ನಪ್ಪಿದ್ದಾನೆಂದು ವರದಿಗಳು ತಿಳಿಸಿವೆ.
ಸಾವನ್ನಪ್ಪಿದ ವ್ಯಕ್ತಿ ಉತ್ತರಪ್ರದೇಶದ ಮೂಲದವರೆಂದು ಹೇಳಲಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ಪುಲ್ವಾಮ ಜಿಲ್ಲೆಯ ಟ್ರಾಲ್ ನಲ್ಲಿರುವ ಮಾಜಿ ಶಾಸಕರೊಬ್ಬರ ಮನೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಈ ವೇಳೆ ಸಿಆರ್'ಪಿಎಫ್ ಯೋಧರೊಬ್ಬರು ಗಾಯಗೊಂಡಿದ್ದರು.