ಕೋಲ್ಕತಾ: ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿ ಗಿರಿಜಾ ದೇವಿ(88 ವರ್ಷ) ಅವರು ಹೃದಯಾಘಾತಕ್ಕೆ ಒಳಗಾಗಿ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಿರಿಜಾ ದೇವಿ ಅವರು ನಿನ್ನೆ ಮಧ್ಯಾಹ್ನದ ಸುಮಾರಿನಲ್ಲಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೀಗಾಗಿ ನಿನ್ನೆ ಮಧ್ಯಾಹ್ನವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ‘ಠುಮ್ರಿ’ಯ ರಾಣಿ ಎಂದೇ ಖ್ಯಾತರಾಗಿದ್ದ ಗಿರಿಜಾದೇವಿ ಅವರು ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿಗಳನ್ನು ಪಡೆದಿದ್ದರು.
88 ವರ್ಷ ವಯಸ್ಸಿನ ಗಿರಿಜಾ ದೇವಿ ಅವರು ಓರ್ವ ಮಗಳನ್ನು ಅಗಲಿದ್ದಾರೆ.