ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ಭಯೋತ್ಪಾದನೆಗೆ 'ನಿರ್ಮೂಲನೆ'ಯೇ ಸೂಕ್ತ ಉತ್ತರ: ಮೆಹಬೂಬಾ ಮುಫ್ತಿ ಹೇಳಿಕೆ ಖಂಡಿಸಿದ ಸ್ವಾಮಿ

ಉಗ್ರರ ಕುಟುಂಬಸ್ಥರ ಮೇಲೆ ಭದ್ರತಾ ಪಡೆಗಳು, ಪೊಲೀಸರು ದಾಳಿ ಮಾಡಬಾರದು ಎಂಬ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರ ಹೇಳಿಕೆಯನ್ನು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ...

ನವದೆಹಲಿ: ಉಗ್ರರ ಕುಟುಂಬಸ್ಥರ ಮೇಲೆ ಭದ್ರತಾ ಪಡೆಗಳು, ಪೊಲೀಸರು ದಾಳಿ ಮಾಡಬಾರದು ಎಂಬ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರ ಹೇಳಿಕೆಯನ್ನು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಗುರುವಾರ ತೀವ್ರವಾಗಿ ಖಂಡಿಸಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಮೆಹಬೂಬಾ ಮುಫ್ತಿಯವರು ಫತ್ವಾ ಹೊರಡಿಸುವ ಹಾಕಿಲ್ಲ. ಅವರು ಅವರ ಅಭಿಪ್ರಾಯವನ್ನಷ್ಟೇ ನೀಡಬಹುದು. ಇಂತಹ ಅಭಿಪ್ರಾಯಗಳನ್ನು ತಿರಸ್ಕರಿಸಬೇಕು. ಉಗ್ರರು ಒಂದು ಸ್ಥಳದಲ್ಲಿ ಅವಿತುಕೊಂಡಿದ್ದಾರೆ ಎಂದರೆ, ಅಲ್ಲಿ ಭದ್ರತಾ ಪಡೆಗಳು ದಾಳಿ ನಡೆಸಬೇಕಾಗುತ್ತದೆ. ಭಯೋತ್ಪಾದನೆಗೆ 'ನಿರ್ಮೂಲನೆಯೇ' ಸೂಕ್ತ ಉತ್ತರ ಎಂದು ಹೇಳಿದ್ದಾರೆ. 
ನಿನ್ನೆಯಷ್ಟೇ ಗಂದೇರ್ಬಲ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೆಹಬೂಬಾ ಮುಫ್ತಿಯವರು, ಉಗ್ರರು ಜನರನ್ನು ಹತ್ಯೆ ಮಾಡುತ್ತಾರೆ. ಪೊಲೀಸರು ಅವರ ಮನೆಗಳನ್ನು ನಾಶಪಡಿಸುತ್ತಾರೆ. ಆದರೆ, ಭದ್ರತಾ ಪಡೆಗಳಾಗಲೀ ಅಥವಾ ಪೊಲೀಸರಾಗಲೀ ಉಗ್ರರ ಕುಟುಂಬಸ್ಥರ ಮೇಲೆ ದಾಳಿ ಮಾಡಬಾರದು. ಉಗ್ರರು ಹಾಗೂ ಪೊಲೀಸರಿಗಿರುವ ವ್ಯತ್ಯಾಸಗಳನ್ನು ಪೊಲೀಸರು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!