ರಾಜ್ ಠಾಕ್ರೆ 
ದೇಶ

ಗುಜರಾತ್ ಚುನಾವಣೆ ನಂತರ ಪ್ರತಿಪಕ್ಷಗಳು ಬಲಿಷ್ಠವಾಗಲಿವೆ: ರಾಜ್ ಠಾಕ್ರೆ

ಗುಜರಾತ್ ವಿಧಾನಸಭೆಯ ಚುನಾವಣೆಯ ನಂತರ ದೇಶದಲ್ಲಿ ಪ್ರತಿಪಕ್ಷಗಳು ಬಲಿಷ್ಠವಾಗಲಿವೆ ಎಂದು ಮಹಾರಾಷ್ಟ್ರ ನವನಿರ್ಮಾಣ....

ಮುಂಬೈ: ಗುಜರಾತ್ ವಿಧಾನಸಭೆಯ ಚುನಾವಣೆಯ ನಂತರ ದೇಶದಲ್ಲಿ ಪ್ರತಿಪಕ್ಷಗಳು ಬಲಿಷ್ಠವಾಗಲಿವೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ(ಎಂಇಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಗುರುವಾರ ಹೇಳಿದ್ದಾರೆ.
'ಸದ್ಯ ಪ್ರತಿಪಕ್ಷಗಳು ಸ್ವಲ್ಪ ದುರ್ಬಲವಾಗಿವೆ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಗುಜರಾತ್ ಚುನಾವಣೆಯ ನಂತರ ಬಲಿಷ್ಠವಾಗಲಿವೆ. ಇದೇ ಡಿಸೆಂಬರ್ ನಲ್ಲಿ ನಡೆಯುವ ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ ಪ್ರತಿಪಕ್ಷಗಳಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ' ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.
ಮುಂಬೈನಲ್ಲಿ ನಡೆದ ಆಜ್ ತಕ್ ಮಂಥನ್ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ ಠಾಕ್ರೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರು ಗುಜರಾತ್ ನಲ್ಲಿ ಭಾರಿ ಪ್ರಚಾರ ನಡೆಸುತ್ತಿರುವುದು ನನಗೆ ಅಚ್ಚರಿ ಮೂಡಿಸಿದೆ. ಪ್ರಧಾನಿ ತಮ್ಮ ತವರು ರಾಜ್ಯದಲ್ಲೇ ಇಷ್ಟೋಂದು ರ್ಯಾಲಿ ಮಾಡುವ ಅಗತ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ದೇಶದ ಮುಖ್ಯಸ್ಥರು ಕೇವಲು ಒಂದು ರಾಜ್ಯಕ್ಕೆ ಸಿಮೀತವಾಗುವುದು ಸರಿಯಲ್ಲ ಎಂದಿದ್ದಾರೆ.
ಒಂದು ವೇಳೆ ಗುಜರಾತ್ ನಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಉತ್ತಮ ಕೆಲಸಗಳನ್ನು ಮಾಡಿದ್ದರೆ ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರು ಪಕ್ಷದ ಪರ ಪ್ರಚಾರ ಮಾಡುವ ಅಗತ್ಯವಿರಲಿಲ್ಲ ಎಂದು ಎಂಎನ್ಎಸ್ ಮುಖ್ಯಸ್ಥ ಹೇಳಿದ್ದಾರೆ. ಅಲ್ಲದೆ ನೋಟ್ ನಿಷೇಧದ ನಂತರ ಕೇಂದ್ರ ಸರ್ಕಾರ ಹೆಚ್ಚು ಹೊಸ ನೋಟ್ ಗಳ ಮುದ್ರಣ ಮಾಡಿದೆ ಮತ್ತು ಅದರ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!