ಸಾಂದರ್ಭಿಕ ಚಿತ್ರ 
ದೇಶ

ಆಗ್ರಾದಲ್ಲಿ ಸ್ವಿಸ್ ದಂಪತಿಗೆ ಥಳಿತ: ಉತ್ತರ ಪ್ರದೇಶ ಪೊಲೀಸರಿಂದ ಓರ್ವನ ಬಂಧನ

ಆಗ್ರಾದಲ್ಲಿ ಸ್ವಿಡ್ಜರ್'ಲ್ಯಾಂಡ್ ದಂಪತಿಗೆ ಹಿಗ್ಗಾಮುಗ್ಗಾ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಓರ್ವನನ್ನು ಬಂಧಿಸಿದ್ದು,

ನವದೆಹಲಿ: ಆಗ್ರಾದಲ್ಲಿ ಸ್ವಿಡ್ಜರ್'ಲ್ಯಾಂಡ್ ದಂಪತಿಗೆ ಹಿಗ್ಗಾಮುಗ್ಗಾ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇತರೆ ಮೂವರಿಗಾಗಿ ತೀವ್ರ ಶೋಧ ನಡೆಸುತ್ತಿರುವುದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ, 
ಸ್ವಿಸ್ ದಂಪತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಇಂದು ಆಗ್ರ-ರಾಜಸ್ತಾನ ಗಡಿಯಲ್ಲಿ ಬಂಧಿಸಿದ್ದೇವೆ ಎಂದು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಚಂದ್ರ ಪ್ರಕಾಶ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಸ್ವಿಡ್ಜರ್'ಲ್ಯಾಂಡ್ ದಂಪತಿಗಳು ಕಳೆದ ಭಾನುವಾರ ಆಗ್ರಾದ ಫತೇಪುರ್ ಸಿಕ್ರಿಗೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕೆಲ ಕಿಡಿಗೇಡಿಗಳು ದಂಪತಿ ಬಗ್ಗೆ ಕೆಟ್ಟ ಪದಗಳನ್ನು ಬಳಕೆ ಮಾಡಿ ಮಾತನಾಡಿದ್ದಾರೆ. ಅಲ್ಲದೆ, ಸೆಲ್ಫೀ ತೆಗೆದುಕೊಳ್ಳುತ್ತಿದ್ದ ದಂಪತಿಗಳನ್ನು ತಡೆದು ಥಳಿಸಿದ್ದರು. ಹಲ್ಲೆಗೊಳಗಾದ ಸ್ವಿಸ್ ದಂಪತಿಗಳು ಆಗ್ರಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
ತಮ್ಮ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಸ್ವಿಸ್ ದಂಪತಿಗಳು ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಆದರೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ ಎಂದು ಪ್ರಕಾಶ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT