ದೇವೇಂದ್ರ ಫಡ್ನವಿಸ್ 
ದೇಶ

ಮೈತ್ರಿ ಬಗ್ಗೆ ನಿರ್ಧರಿಸಿ: ಶಿವಸೇನೆಗೆ ಮಹಾರಾಷ್ಟ್ರ ಸಿಎಂ ಫಡ್ನವಿಸ್

ಶಿವಸೇನೆಯ 'ದ್ವಿಮುಖ ನಿಲುವು'ನಿಂದ ಯಾವುದೇ ಪ್ರಯೋಜನೆ ಆಗುವುದಿಲ್ಲ ಎಂದು ಎಚ್ಚರಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ...

ಮುಂಬೈ: ಶಿವಸೇನೆಯ 'ದ್ವಿಮುಖ ನಿಲುವು'ನಿಂದ ಯಾವುದೇ ಪ್ರಯೋಜನೆ ಆಗುವುದಿಲ್ಲ ಎಂದು ಎಚ್ಚರಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸಬೇಕೆ ಎಂಬುದರ ಕುರಿತು ಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ನಿರ್ಧರಿಸಲಿ ಎಂದು ಶುಕ್ರವಾರ ಹೇಳಿದ್ದಾರೆ.
ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಹಾ ಸಿಎಂ, ಶಿವಸೇನೆ ನಮ್ಮ ಎಲ್ಲಾ ನಿರ್ಧಾರಗಳನ್ನು ವಿರೋಧಿಸುತ್ತಿದೆ. ಅವರು ತಮ್ಮ ಸಲಹೆ ನೀಡಬಹುದು. ಆದರೆ ಏಕಕಾಲಕ್ಕೆ ಆಡಳಿತ ಮತ್ತು ಪ್ರತಿಪಕ್ಷದ ಪಾತ್ರ ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಉದ್ಧವ್ ಠಾಕ್ರೆ ಅವರು ಒಂದು ಪಕ್ಷವಾಗಿ ಮೈತ್ರಿ ಬಗ್ಗೆ ನಿರ್ಧರಿಸಲಿ. ಏಕೆಂದರೆ ಜನ ದ್ವಂದ್ವ ನಿಲುವನ್ನು ಇಷ್ಟಪಡುವುದಿಲ್ಲ. ಶಿವಸೇನಾ ಸಂಸ್ಥಾಪಕ ಹಾಗೂ ಉದ್ಧವ್ ಠಾಕ್ರೆ ಅವರ ತಂದೆ ಬಾಳಾಸಾಹೇಬ್ ಠಾಕ್ರೆ ಅವರು ಎಲ್ಲಾ ನಿರ್ಧಾರಗಳನ್ನು ನಕಾರಾತ್ಮಕ ದೃಷ್ಟಿಯಿಂದ ನೋಡುತ್ತಿರಲಿಲ್ಲ. ಆದರೆ ಸದ್ಯ ಶಿವಸೇನೆಯ ಕೆಲವು ನಾಯಕರು ತಾವು ಪಕ್ಷದ ಮುಖ್ಯಸ್ಥರಿಗಿಂತ ದೊಡ್ಡವರು ಎಂದು ಭಾವಿಸಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಮಹಾ ಸಿಎಂ ಮಿತ್ರಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಿನ್ನೆಯಷ್ಟೇ  ಖಾಸಗಿ ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಶಿವಸೇನೆ ಸಂಸದ ಸಂಜಯ್ ರಾವತ್ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹವಾ ಕುಗ್ಗುತ್ತಿದ್ದು, ದೇಶವನ್ನು ಮುನ್ನಡೆಸುವ ಶಕ್ತಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಲವು ಟೀಕೆಗಳು ವ್ಯಕ್ತವಾಗತೊಡಗಿದ್ದು, ಇದೀಗ ಯೂಟರ್ನ್ ಹೊಡೆದ ರಾವತ್,  ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ವಾಸ್ತವಿಕತೆ ಹಾಗೂ ದೇಶದಲ್ಲಿ ನಿರ್ಮಾಣವಾಗಿರುವ ಪ್ರಸ್ತುತ ವಾತಾವರಣದ ಕುರಿತಂತೆ ನಾನು ಮಾತನಾಡಿದ್ದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video