ನವದೆಹಲಿ: ಎರಡು ದಿನಗಳ ಹಿಂದಷ್ಟೇ ನನ್ನ ಮೊಬೈಲ್ ಸಂಪರ್ಕ ಕಡಿತಗೊಳಿಸಿದರೂ ನಾನು ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಮಾಡುವುದಿಲ್ಲ ಎಂದಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇಂದು ಆಧಾರ್ ಕಡ್ಡಾಯ ನಿಯಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸ್ಪೀಕರಿಸಿದ್ದು, ಸೋಮವಾರ ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ಕೇಂದ್ರ ಸರ್ಕಾರ ಜನರ ಹಕ್ಕು ಮತ್ತು ಖಾಸಗಿತನದಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ಹೀಗಾಗಿ ಮೊಬೈಲ್ ನಂಬರ್ ಜೊತೆ ಆಧಾರ್ ಲಿಂಕ್ ಮಾಡಬೇಡಿ. ನಾನು ಸಹ ಆಧಾರ್ ಲಿಂಕ್ ಮಾಡುವುದಿಲ್ಲ ಎಂದು ಟಿಎಂಸಿ ಕೋರ್ ಕಮಿಟಿ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಹೇಳಿದ್ದರು.