ದೇಶ

ಗುಜರಾತ್: ಪೊಲೀಸರ ಗುಂಡೇಟಿಗೆ ವ್ಯಕ್ತಿಯೊರ್ವ ಸಾವು

Vishwanath S
ದಾವೊದ್(ಗುಜರಾತ್): ಪೊಲೀಸರ ವಿಚಾರಣೆ ವೇಳೆ ಆರೋಪಿತ ವ್ಯಕ್ತಿಯೊರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಥಳೀಯರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ವ್ಯಕ್ತಿಯೊರ್ವ ಮೃತಪಟ್ಟಿದ್ದಾರೆ. 
ಪೊಲೀಸರು ವಿಚಾರಣೆ ವೇಳೆ ಆರೋಪಿತ ವ್ಯಕ್ತಿಯೊರ್ವನಿಗೆ ಚನ್ನಾಗಿ ಥಳಿಸಿದ್ದರಿಂದ ಆತ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಗುಂಡಿನ ದಾಳಿ ನಡೆಸಿದ್ದು ಗುಂಡೇಟಿಗೆ ವ್ಯಕ್ತಿಯೊರ್ವ ಮೃತಪಟ್ಟಿದ್ದಾನೆ. 
ಪೊಲೀಸರ ಮೇಲೆ 500 ಹೆಚ್ಚು ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದರಿಂದ ಗುಂಪನ್ನು ಚದುರಿಸಲು ಪೊಲೀಸರು ಗುಂಡು ಹಾರಿಸಿದ್ದು ಪೊಲೀಸರು ಹಾರಿಸಿದ ಗುಂಡು ತಗುಲಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. 
SCROLL FOR NEXT