ಸಂಗ್ರಹ ಚಿತ್ರ 
ದೇಶ

ಕಾಶ್ಮೀರ ಕಲ್ಲು ತೂರಾಟಗಾರರಿಗೆ ಬಿಸಿ: ಪ್ರತಿಭಟನೆ ನಡೆಸಿದರೆ ದಂಡ, 5 ವರ್ಷ ಜೈಲು!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹಾಗೂ ಸೇನೆಯತ್ತ ಕಲ್ಲು ತೂರಾಟ ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಇನ್ನು ಮುಂದೆ ಕಲ್ಲು ತೂರುವ ಯುವಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹೊಸ ಕಾನೂನು ಜಾರಿಗೆ ತರಲು ಸಿದ್ಧತೆ ನಡೆಸಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹಾಗೂ ಸೇನೆಯತ್ತ ಕಲ್ಲು ತೂರಾಟ ಮಾಡುವವರ ವಿರುದ್ಧ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ಇನ್ನು ಮುಂದೆ ಕಲ್ಲು ತೂರುವ ಯುವಕರ ವಿರುದ್ಧ  ಕಾನೂನು ಕ್ರಮ ಕೈಗೊಳ್ಳಲು ಹೊಸ ಕಾನೂನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
ಸರ್ಕಾರದ ಈ ಹೊಸ ಕಾನೂನಿನ ಅನ್ವಯ ಕಲ್ಲು ತೂರುವ ಮತ್ತು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಅವರಿಗೆ ದಂಡ ಮತ್ತು 5 ವರ್ಷಗಳವರೆಗೂ ಜೈಲು ಶಿಕ್ಷೆ ವಿಧಿಸುವಂತಹ ಕಾನೂನು  ರಚಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಈಗಾಗಲೇ ಕಾಶ್ಮೀರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು, ಕಾಶ್ಮೀರ ರಾಜ್ಯಪಾಲ ಎನ್ ಎನ್ ವೋಹ್ರಾ ಅವರು ಇದಕ್ಕೆ ಅನುಮೋದನೆ ಕೂಡ ನೀಡಿದ್ದಾರೆ ಎಂದು ತಿಳಿದುಬಂದಿದೆ. "ಜಮ್ಮು  ಮತ್ತು ಕಾಶ್ಮೀರ ಸಾರ್ವಜನಿಕ ಆಸ್ತಿ (ಹಾನಿ ತಡೆಗಟ್ಟುವಿಕೆ) (ತಿದ್ದುಪಡಿ) ಸುಗ್ರೀವಾಜ್ಞೆ, 2017ಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ.
ಈ ಕಾನೂನಿ ಅನ್ವಯ ಪ್ರತಿಭಟನೆ ಹೆಸರಲ್ಲಿ ಸಾರ್ವಜನಿಕರ ಆಸ್ತಿ-ಪಾಸ್ತಿಗೆ ಹಾನಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಅಧಿಕಾರ ಪೊಲೀಸರಿಗೆ ದೊರೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!