ಅಮ್ಮನ ಆರೋಗ್ಯ ಸುಧಾರಿಸುತ್ತಿದೆ, ಗಾಬರಿಪಡುವ ಅಗತ್ಯವಿಲ್ಲ: ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು...
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಸುಧಾರಿಸುತ್ತಿದ್ದಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ಅವರ ಪುತ್ರ ರಾಹುಲ್ ಗಾಂಧಿ ಹೇಳಿದ್ದಾರೆ.
ಶಿಮ್ಲಾದಲ್ಲಿದ್ದ ನಮ್ಮ ತಾಯಿಯವರಿಗೆ ಹೊಟ್ಟೆಯಲ್ಲಿ ದೋಷ ಕಾಣಿಸಿಕೊಂಡಿತು. ಹೀಗಾಗಿ ಅವರನ್ನು ದೆಹಲಿಗೆ ವಾಪಸ್ ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲಿಸಿದ್ದೇವೆ. ಯಾರೂ ಗಾಬರಿಪಡುವ ಅಗತ್ಯವಿಲ್ಲ. ಅವರ ಆರೋಗ್ಯ ಈಗ ಸುಧಾರಿಸುತ್ತಿದೆ. ಜನರ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.