ರಕ್ಷಣಾ ಕ್ಷೇತ್ರದಲ್ಲಿ ಮೇಕ್ ಇನ್ ಇಂಡಿಯಾ ಗೆ ಉತ್ತೇಜನ: ನಿರ್ಮಲಾ ಸೀತಾರಾಮನ್
ಮೇಕ್ ಇನ್ ಇಂಡಿಯಾ ಯೋಜನೆಯನ್ನು ರಕ್ಷಣಾ ಕ್ಷೇತ್ರದಲ್ಲಿ ಉತ್ತೇಜಿಸುವುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಲಾಖೆಗೆ ಭರವಸೆ ನೀಡಿದ್ದಾರೆ.
ನವದೆಹಲಿ: ಮೇಕ್ ಇನ್ ಇಂಡಿಯಾ ಯೋಜನೆಯನ್ನು ರಕ್ಷಣಾ ಕ್ಷೇತ್ರದಲ್ಲಿ ಉತ್ತೇಜಿಸುವುದಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಲಾಖೆಗೆ ಭರವಸೆ ನೀಡಿದ್ದಾರೆ.
ಲೈಸೆನ್ಸಿಂಗ್ ಹಾಗೂ ತೆರಿಗೆ ವಿಷಯಗಳ ಕುರಿತ ಮಿಲಿಟರಿ ಸಂಸ್ಥೆಗಳ ಕಳವಳಕ್ಕೆ ಸಂಬಂಧಿಸಿದಂತೆ ಸೇನಾ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ನಿರ್ಮಲಾ ಸೀತಾರಾಮನ್, ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಭಾಗಿಯಾಗಲು ಖಾಸಗಿ ಸಂಸ್ಥೆಗಳಿಗೂ ಅವಕಾಶ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ರಕ್ಷಣಾ ಕ್ಷೇತ್ರಾದಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಯ ಬಗ್ಗೆ ಕಾನ್ಫೆಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ)ನ ಪ್ರತಿನಿಧಿಗಳು, ಭಾರತ ಹಾಗೂ ವಿದೇಶಿ ರಕ್ಷಣಾ ಸಾಮಗ್ರಿಗಳ ಉತ್ಪಾದನಾ ಸಂಸ್ಥೆಯವರೊಂದಿಗೂ ನಿರ್ಮಲಾ ಸೀತಾರಾಮನ್ ಚರ್ಚೆ ನಡೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.