ಸಾಂದರ್ಭಿಕ ಚಿತ್ರ 
ದೇಶ

ಬಂಡಿಪೋರಾದಲ್ಲಿ ಎನ್'ಕೌಂಟರ್; ಇಬ್ಬರು ಉಗ್ರರನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ...

ಬಂಡಿಪೋರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ. 
ಬಂಡಿಪೋರಾದ ಹಜಿನ್ ಪ್ರದೇಶದಲ್ಲಿರುವ ಮಿರ್ ಮೊಹಲ್ಲಾದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರ ಸದೆಬಡಿಯಲು  ಸ್ಥಳದಲ್ಲಿ 45 ಬಿಎನ್ ಸಿಆರ್'ಪಿಎಫ್ ಪಡೆ, ವಿಶೇಷ ಸೇನಾ ಪಡೆ ಹಾಗೂ 13 ರಾಷ್ಟ್ರೀಯ ರೈಫಲ್ಸ್ ಭಾರೀ ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಗಳು ತಿಳಿಸಿವೆ. 
ಸೇನಾಪಡೆ ಕಾರ್ಯಾಚರಣೆಗಿಳಿಯುತ್ತಿದ್ದಂತೆಯೇ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಾಚರಣೆ ಚುರುಕುಗೊಳಿಸಿರುವ ಸೇನಾಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಗಾಯಗೊಂಡಿದ್ದ ಪೊಲೀಸ್ ಒಬ್ಬರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ. 

ಪ್ರಸ್ತುತ ಸ್ಥಳದಲ್ಲಿ ಮತ್ತೆ 2-3 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಸ್ಥಳದಲ್ಲಿ ಕಲ್ಲುತೂರಾಟ ಆರಂಭಗೊಂಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT