ಹೈದರಾಬಾದ್: ಹೈದರಾಬಾದ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಮಾಜಿ ಮ್ಯಾನೇಜರ್ ಎಂ.ವಿ.ಶ್ರೀಧರ್ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಬಿಸಿಸಿಐ ಕ್ರಿಕೆಟ್ ಆಪರೇಷನ್ಸ್ ಜನರಲ್ ಮ್ಯಾನೇಜರ್ ಆಗಿದ್ದ 51 ವರ್ಷದ ಶ್ರೀಧರ್ ಅವರು ಇತ್ತೀಚಿಗಷ್ಟೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇಂದು ಬೆಳಗ್ಗೆ ಅವರ ನಿವಾಸದಲ್ಲೇ ಶ್ರೀಧರ್ ಅವರಿಗೆ ಸ್ಟ್ರೋಕ್ ಆಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯಯೇ ಕೊನೆಯುಸಿರೆಳೆದಿದ್ದಾರೆ.
ಶ್ರೀಧರ್ ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದು, 2013ರಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಜನರಲ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಹೈದರಾಬಾದ್ ತಂಡದ ಪರವಾಗಿ 91 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.