ಕೊಲ್ಲಂ ಉಕ್ಕಿನ ಸೇತುವೆ ಕುಸಿತ 
ದೇಶ

ಕೇರಳದಲ್ಲಿ ಉಕ್ಕಿನ ಸೇತುವೆ ಕುಸಿತ; 1 ಸಾವು, 50 ಮಂದಿಗೆ ಗಾಯ

ಕೇರಳದ ಕೊಲ್ಲಂನಲ್ಲಿ ಉಕ್ಕಿನ ಸೇತುವೆ ಕುಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.

ಕೊಲ್ಲಂ: ಕೇರಳದ ಕೊಲ್ಲಂನಲ್ಲಿ ಉಕ್ಕಿನ ಸೇತುವೆ ಕುಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಕೇರಳದ ಕೊಲ್ಲಂನ ಚವರಾದಲ್ಲಿರುವ ಕೇರಳ ಮಿನರಲ್ಸ್ ಮತ್ತು ಮೆಟಲ್ಸ್ ಲಿಮಿಟೆಡ್ ಸಂಸ್ಥೆಯ ಅವರಣದಲ್ಲಿನ ಸೇತುವೆ ಕುಸಿದಿದ್ದು, ಘಟನೆಯಲ್ಲಿ  ಕೆಎಂಎಂಎಲ್ ನ ಓರ್ವ ಮಹಿಳಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಮೃತರನ್ನು  ಶ್ಯಾಮಲಾ ಎಂದು ಗುರುತಿಸಲಾಗಿದ್ದು, ಕಾಲುವೆ ಮೇಲೆ ಕೆಎಂಎಂಎಲ್ ಸಂಪರ್ಕಕ್ಕಾಗಿ ನಿರ್ಮಿಸಿದ್ದ ಉಕ್ಕಿನ ಮೇಲು ಸೇತುವೆ ಮೇಲೆ ನಡೆದು ಹೋಗುತ್ತಿದ್ದಾಗ ಸೇತುವೆಯ ಕಬ್ಬಿಣದ ಸರಳುಗಳು ಸಡಿಲಗೊಂಡು ಸೇತುವೆ  ಕುಸಿದಿದೆ. 
ಘಟನಾ ಸಂದರ್ಭದಲ್ಲಿ ಸೇತುವೆ ಮೇಲೆ ಸುಮಾರು 50ಕ್ಕೂ ಅಧಿಕ ಮಂದಿ ಕೆಎಂಎಂಎಲ್ ನ ನೌಕರರು ಸೇತುವೆ ಮೇಲಿದ್ದರು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,  ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!