ನವದೆಹಲಿ: ಮೊಬೈಲ್ ನಂಬರ್ ಗೂ ಆಧಾರ್ ಕಡ್ಡಾಯಗೊಳಿಸಿರುವ ಆದೇಶಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ತಕರಾರ ಅರ್ಜಿಗೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಸರ್ಕಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಈ ಬಗ್ಗೆ ಇಂದು ನಡೆದ ವಿಚಾರಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್ ಸಂಸತ್ ಕೈಗೊಂಡಿರುವ ನಿರ್ಧಾರವನ್ನು ಒಂದು ರಾಜ್ಯ ಸರ್ಕಾರ ಹೇಗೆ ಪ್ರಶ್ನಿಸಲು ಸಾಧ್ಯ ಎಂದು ಪ್ರಶ್ನಿಸಿದೆ. ಅಲ್ಲದೆ ಬಂಗಾಳ ಸರ್ಕಾರಕ್ಕೆ ಆ ಅಧಿಕಾರವೇ ಇಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಆಧಾರ್ ನಿರ್ಧಾರದ ಬಗ್ಗೆ ಅಸಮಾಧಾನವಿದ್ದರೆ ಮಮತಾ ಬ್ಯಾನರ್ಡಿ ವೈಯುಕ್ತಿಕವಾಗಿ ಅರ್ಜಿಸಲ್ಲಿಸಲಿ ಎಂದು ಕಿಡಿಕಾರಿದೆ.
ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಕೆ ಸಿಕ್ರಿ ಅವರು ಪ್ರಕರಣ ಸಂಬಂಧ ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದಾರೆ. ಅಲ್ಲದೆ ಈ ಸಂಬಂಧ ಟೆಲಿಕಾಂ ಸಂಸ್ಥೆಗಳಿಗೂ ನೋಟಿಸ್ ಜಾರಿ ಮಾಡಲಾಗಿದ್ದು, ಈ ಸಂಬಂಧ ತಕರಾರುಗಳಿದ್ದರೆ ವಿವರಿಸುವಂತೆ ಹೇಳಿದ್ದು, ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.
ಸುಪ್ರೀಂ ಕೋರ್ಟ್ ವಿಚಾರಣೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮೊಬೈಲ್ ನಂಬರ್ ಗೆ ಆಧಾರ್ ನಂಬರ್ ಲಿಂಕ್ ಮಾಡುವ ಅಂತಿಮ ದಿನಾಂಕವನ್ನು ಮಾರ್ಚ್ 31ರವೆಗೂ ಮುಂದೂಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics