ಪಣಜಿ: ಪಾಕಿಸ್ತಾನದೊಂದಿಗೆ ವ್ಯವಹರಿಸುವ ವಿಷಯದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮಾಜಿ ಪ್ರಧಾನಿ ಇಂದಿರಾ ಗಾಂಧಿಯಿಂದ ಪ್ರೇರಣೆ ಪಡೆಯಲಿ ಎಂದು ಕಾಂಗ್ರೆಸ್ ಪಕ್ಷ ಸಲಹೆ ನೀಡಿದೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಗೋವಾ ಕಾಂಗ್ರೆಸ್ ಅಧ್ಯಕ್ಷರಾದ ಶಾಂತಾರಾಮ್ ನಾಯ್ಕ್, ಪಾಕ್ ವಿಷಯದಲ್ಲಿ ನಿರ್ಮಲಾ ಸೀತಾರಾಮನ್ ಮೋದಿ ಅವರು ಮಾಡುತ್ತಿದ್ದುದ್ದನ್ನು ಪುರಾನುವರ್ತಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದು ಇಂದಿರಾ ಗಾಂಧಿಯಿಂದ ಪ್ರೇರಣೆ ಪಡೆಯಲಿ ಎಂದಿದ್ದಾರೆ.
ನಿರ್ಮಲಾ ಸೀತಾರಾಮನ್ ಪಾಕಿಸ್ತಾನದ ವಿಷಯದಲ್ಲಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು, ಮೋದಿ ಬಯಸುವಂತೆ ಕೇವಲ ತೋರಿಕೆಯ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ನಾಯ್ಕ್ ಸಲಹೆ ನೀಡಿದ್ದಾರೆ.