ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕನ್ನಡ ರಾಜ್ಯೋತ್ಸವ ಸಂಭ್ರಮ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ ಮೋದಿ

ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕನ್ನಡ ರಾಜ್ಯೋತ್ಸವ ದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ...

ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Manjula VN
Updated On : 1 Nov 2017, 9:45 am

ನವದೆಹಲಿ: ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕನ್ನಡ ರಾಜ್ಯೋತ್ಸವ ದಿನ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ. 

ರಾಜ್ಯಾದ್ಯಂತ ಇಂದು 62ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಜ್ಯದ ಜನತೆಗೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ತಿಳಿಸಿದ್ದಾರೆ. 

Advertisement

Advertisement

ಕರ್ನಾಟಕ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ನನ್ನ ಶುಭ ಹಾರೈಕೆಗಳು. ಕರ್ನಾಟಕದ ಶ್ರೀಮಂತ ಸಂಸ್ಕೃತಿಯ ಬಗ್ಗೆ ನಮಗೆ ಹೆಮ್ಮೆ ಇದೆ. ಅದರ ಪ್ರಗತಿಗಾಗಿ ಪ್ರಾರ್ಥಿಸುತ್ತೇನೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಏಕೀಕರಣಗೊಂಡ ಕಾರಣ 1956ರಿಂದ ಪ್ರತೀ ವರ್ಷ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments