ನವದೆಹಲಿ: ನ್ಯೂಯಾರ್ಕ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ.
ನ್ಯೂಯಾರ್ಕ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸುತ್ತೇನೆ, ಮೃತರು ಹಾಗೂ ಗಾಯಗೊಂಡವರ ಕುಟುಂಬಗಳಿಗೆ ನಮ್ಮ ಸಾಂತ್ವನವಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ನ್ಯೂಯಾರ್ಕ್ ನಲ್ಲಿರುವ ವಿಶ್ವ ವ್ಯಾಪಾರ ಕೇಂದ್ರ ಸ್ಮಾರಕದ ಬಳಿ ನಡೆದಿರುವ ಉಗ್ರ ದಾಳಿಯಲ್ಲಿ 8 ಮಂದಿಯನ್ನು ಹತ್ಯೆ ಮಾಡಲಾಗಿದೆ.
ಮೂಲಗಳ ಪ್ರಕಾರ ಬಾಡಿಗೆ ಪಿಕಪ್ ವಾಹನವೊಂದನ್ನು ಉಗ್ರಗಾಮಿಯೋರ್ವ ಪಾದಚಾರಿಗಳು ಮತ್ತು ಸೈಕಲ್ ಸವಾರರ ಮೇಲೆ ಹರಿಸಿ 8 ಮಂದಿಯನ್ನು ಹತ್ಯೆ ಮಾಡಿದ್ದಾನೆ. ಅಂತೆಯೇ ಘಟನೆಯಲ್ಲಿ ಇತರೆ 11 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.