ರಾಷ್ಟ್ರಪತಿ ಭವನದಲ್ಲಿ ಪ್ರತಿಜ್ಞಾ ವಿಧಿ ಬೋಧನೆ 
ದೇಶ

ಮೋದಿ ಸಂಪುಟ ಪುನಾರಚನೆ: 9 ಮಂದಿ ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಒಟ್ಟು 9 ಮಂದಿ ನೂತನ ಕೇಂದ್ರ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನವದೆಹಲಿ: ಕರ್ನಾಟಕದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿದಂತೆ ಒಟ್ಟು 9 ಮಂದಿ ನೂತನ ಕೇಂದ್ರ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಧಾನಿ ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ 9 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋದಿಸಿದರು.  ಇದೇ ವೇಳೆ ನಾಲ್ಕು ಮಂದಿ ರಾಜ್ಯ ಸಚಿವರಿಗೆ ಭಡ್ತಿ ನೀಡಲಾಗಿದ್ದು, ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತಾರಾಮನ್, ಮುಕ್ತಾರ್ ಅಬ್ಬಾಸ್ ನಖ್ವಿ, ಪಿಯೂಷ್ ಗೋಯಲ್ ಅವರಿಗೆ ಕ್ಯಾಬಿನೆಟ್ ದರ್ಜೆಗೆ ಭಡ್ತಿ ನೀಡಲಾಗಿದೆ. ಈ ನಾಲ್ಕೂ ಸಚಿವರಿಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಇನ್ನು ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್ ಸುಮಿತ್ರಾ ಮಹಾಜನ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ  ಸೇರಿದಂತೆ ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಸೇರಿದಂತೆ ಹಲವು ಸಚಿವರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಇವರೊಂದಿಗೆ ಭಾರತೀಯ ಸೇನೆಯ ಮೂರು ದಳಗಳ ಮುಖ್ಯಸ್ಥರು ಹಾಜರಿದ್ದರು. ಇನ್ನು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಉಮಾಭಾರತಿ ಅವರು ಗೈರಾಗಿದ್ದು, ವಾರಣಾಸಿಯಲ್ಲಿನ  ಕಾರ್ಯಕ್ರಮದ ನಿಮಿತ್ತ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎಂದು ಹೇಳಲಾಗಿದೆ.
ನೂತನ ಸಚಿವರಿಗೆ ರಾಜ್ಯ ಸಚಿವ ಸ್ಥಾನಮಾನ
ಇದೇ ವೇಳೆ ಪ್ರಸ್ತುತ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಎಲ್ಲ 9 ಸಚಿವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಮಾಣ ವಚನ ಸ್ವೀಕರಿಸಿದ ಪ್ರಮುಖರು:
ರಾಜ್ಯ ಸಚಿವರು
ಅನಂತಕುಮಾರ್‌ ಹೆಗಡೆ (ಉತ್ತರ ಕನ್ನಡ ಲೋಕಸಭೆ ಕ್ಷೇತ್ರ, ಕರ್ನಾಟಕ)
ಶಿವಪ್ರತಾಪ ಶುಕ್ಲಾ (ರಾಜ್ಯಸಭೆ ಸದಸ್ಯ, ಉತ್ತರ ಪ್ರದೇಶ)
ಅಶ್ವಿನಿಕುಮಾರ್ ಚೌಬೆ (ಬಕ್ಸರ್‌ ಲೋಕಸಭೆ ಕ್ಷೇತ್ರ, ಬಿಹಾರ)
ವೀರೇಂದ್ರಕುಮಾರ್ (ಟಿಕಮ್‌ಗಡ ಲೋಕಸಭೆ ಕ್ಷೇತ್ರ, ಮಧ್ಯಪ್ರದೇಶ)
ರಾಜಕುಮಾರ್ ಸಿಂಗ್ (ಅರಾ, ಲೋಕಸಭೆ ಕ್ಷೇತ್ರ, ಬಿಹಾರ)
ಹರದೀಪ್‌ ಸಿಂಗ್ ಪುರಿ (ನಿವೃತ್ತ ಐಎಫ್‌ಎಸ್‌ ಅಧಿಕಾರಿ, ಪಂಜಾಬ್‌)
ಗಜೇಂದ್ರ ಸಿಂಗ್ ಶೆಖಾವತ್‌ (ಜೋಧಪುರ, ಲೋಕಸಭೆ, ರಾಜಸ್ಥಾನ)
ಸತ್ಯಪಾಲ್‌ ಸಿಂಗ್ (ಬಾಗಪತ್, ಲೋಕಸಭೆ ಕ್ಷೇತ್ರ, ಉತ್ತರ ಪ್ರದೇಶ)
ಅಲ್ಫೋನ್ಸ್‌ ಕಣ್ಣನ್‌ ದಾನಮ್‌ (ನಿವೃತ್ತ ಐಎಎಸ್‌ ಅಧಿಕಾರಿ, ಬಿಜೆಪಿ ಸಕ್ರಿಯ ಸದಸ್ಯ, ಕೇರಳ)
ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆದ ಸಚಿವರು
ಧರ್ಮೇಂದ್ರ ಪ್ರಧಾನ್
ನಿರ್ಮಲಾ ಸೀತಾರಾಮನ್
ಮುಕ್ತಾರ್ ಅಬ್ಬಾಸ್ ನಖ್ವಿ
ಪಿಯೂಷ್ ಗೋಯಲ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು

ಇದು ನಿಜಕ್ಕೂ 'ಅಸಹ್ಯಕರ'; ಹೀಗೆ ಆಗುತ್ತಿರುವುದು ಮೂರನೇ ಬಾರಿ: ಆಕ್ರೋಶ ಹೊರಹಾಕಿದ ನಟಿ ತ್ರಿಶಾ!

ಮೈಸೂರು: ಕಾಡಾನೆ ಕಾರ್ಯಾಚರಣೆಗಳಲ್ಲಿ 'ಅಂಬಾರಿ ಆನೆ' ಅಭಿಮನ್ಯುವಿನ ತಾಕತ್ತಾಗಿದ್ದ ಎಡಭಾಗದ ದಂತವೇ ಮುರಿತ!

ಬೆಂಗಳೂರು: ಅಪಾರ್ಟ್‌ಮೆಂಟ್‌ನಲ್ಲೇ ಹೆಬ್ಬಾವು ಸಾಕಿದ್ದ ಆಸಾಮಿ; ಅರಣ್ಯ ಇಲಾಖೆ ದಾಳಿ!

ಆಗ್ರಾ: ಸೋನಂ, ಸಿಯಾ ಆಯ್ತು, ಈಗ ರೂಬಿ; ಪತಿಯನ್ನು ಕೊಂದು, ಶವವನ್ನು ಬಾತ್ ರೂಂನ ಟೈಲ್ಸ್ ಕೆಳಗೆ ಹೂತು ಹಾಕಿದ್ದ ಮಹಿಳೆಯ ಬಂಧನ!