ಸುದ್ದಿಗಾರರೊಂದಿಗೆ ನೂತನ ಕೇಂದ್ರ ಸಚಿವರು 
ದೇಶ

ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ಬಡ್ತಿ ಪಡೆದ ಸಚಿವರು!

ರಾಜ್ಯ ಸಚಿವ ಸ್ಥಾನದಿಂದ ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆದ ನಾಲ್ವರು ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆಗೆ ತಕ್ಕಂತೆ ಉತ್ತಮ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.

ನವದೆಹಲಿ: ರಾಜ್ಯ ಸಚಿವ ಸ್ಥಾನದಿಂದ ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆದ ನಾಲ್ವರು ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆಗೆ ತಕ್ಕಂತೆ ಉತ್ತಮ ಕೆಲಸ  ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ  ಮಾಡಬೇಕಿರುವುದು ನಮ್ಮ ಕರ್ತವ್ಯ. ನಮಗೆ ನೀಡಿರುವ ಹೊಸ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇವೆ ಎಂದು ಹೇಳಿದ್ದಾರೆ.
ಅಂತೆಯೇ ಮತ್ತೋರ್ವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಾತನಾಡಿ, ಮೊದಲು ನಮ್ಮ ಮೇಲೆ ಭರವಸೆ ಇಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ. ಎಲ್ಲರೂ ಒಗ್ಗೂಡಿ ಕೆಲಸ ಮಾಡುವ  ಮೂಲಕ 2022ರ ವೇಳೆಗೆ ಭಾರತವನ್ನು ವಿಶ್ವದ ಅಗ್ರ ರಾಷ್ಟ್ರವನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.
ಏತನ್ಮಧ್ಯೆ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸತ್ಯಪಾಲ್ ಸಿಂಗ್ ಅವರ ದೆಹಲಿ ನಿವಾಸದಲ್ಲಿ ಸಂಭ್ರಮಾಚರಣೆ ಮನೆ ಮಾಡಿದ್ದು, ಸಂಬಂಧಿಕರು ಸಿಹಿ ಹಂಚಿ ಸಂಭ್ರಮಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!