ಸಂಗ್ರಹ ಚಿತ್ರ 
ದೇಶ

ನಿರ್ಮಲಾ ಸೀತಾರಾಮನ್ ಗೆ ರಕ್ಷಣಾ ಖಾತೆ, ಗೋಯಲ್ ಗೆ ರೇಲ್ವೇ ಖಾತೆ!

ತೀವ್ರ ಕುತೂಹಲ ಕೆರಳಿಸಿದ್ದ ಮೋದಿ ಸಂಪುಟ ಪುನಾರಚನೆ ಪೂರ್ಣಗೊಂಡಿದ್ದು, ಅಚ್ಚರಿ ಬೆಳವಣಿಗೆ ಎಂಬಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಕ್ಷಣಾ ಸಚಿವಾಲಯದ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಮೋದಿ ಸಂಪುಟ ಪುನಾರಚನೆ ಪೂರ್ಣಗೊಂಡಿದ್ದು, ಅಚ್ಚರಿ ಬೆಳವಣಿಗೆ ಎಂಬಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಕ್ಷಣಾ ಸಚಿವಾಲಯದ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ವಾಣಿಜ್ಯ ಖಾತೆಯನ್ನು ನಿರ್ವಹಿಸಿದ್ದ ನಿರ್ಮಲಾ ಸೀತಾರಾಮನ್ ಅವರು, ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಇದೀಗ ಪ್ರಧಾನಿ ಮೋದಿ ಸಂಪುಟದಲ್ಲಿ ಬಡ್ತಿ  ಪಡೆದಿರುವ ಅವರು ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ರಕ್ಷಣಾ ಖಾತೆಯ ಜವಾಬ್ದಾರಿ ಹೊತ್ತಿದ್ದಾರೆ. ಆ ಮೂಲಕ ಇಂದಿರಾಗಾಂಧಿ ಬಳಿಕ ರಕ್ಷಣಾ ಖಾತೆಯ ಸಚಿವರಾದ ದೇಶದ 2ನೇ ಮಹಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಭಾರತ-ಚೀನಾ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿದ್ದ ಡೊಕ್ಲಾಂ ಗಡಿ ವಿವಾದ ಈಗಷ್ಟೇ ಬಗೆಹರಿದಿದ್ದು, ಇತ್ತ ಪಾಕಿಸ್ತಾನದ ಗಡಿ ತಂಟೆ ಮುಂದುವರೆದಿದೆ. ಹೀಗಾಗಿ ಭಾರತಕ್ಕೆ ಸಂಪೂರ್ಣ ಪ್ರಮಾಣದ ರಕ್ಷಣಾ ಸಚಿವರ  ಅಗತ್ಯತೆ ಇತ್ತು. ಪರಿಕ್ಕರ್ ಅವರು ರಕ್ಷಣಾ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರಾದರೂ, ಗೋವಾ ಚುನಾವಣೆ ಹಿನ್ನಲೆಯಲ್ಲಿ ಅವರು ತವರಿಗೆ ವಾಪಸಾಗಿದ್ದರು. ಇದೀಗ ಈ ಮಹತ್ವದ ಜವಾಬ್ದಾರಿಯನ್ನು ನಿರ್ಮಲಾ  ಸೀತಾರಾಮನ್ ಅವರಿಗೆ ನೀಡಲಾಗಿದೆ. ಈ ಹಿಂದೆ ವಾಣಿಜ್ಯ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿ ಬಡ್ತಿ ಪಡೆದಿರುವ ನಿರ್ಮಲಾ ಸೀತಾರಾಮನ್ ರಕ್ಷಣಾ ಖಾತೆಯನ್ನೂ ಸಮರ್ಥವಾಗಿ ನಿಭಾಯಿಸಲಿದ್ದಾರೆಯೇ ಎಂಬುದನ್ನು  ಕಾದು ನೋಡಬೇಕಿದೆ.
ದೇಶದ ಮೊದಲ ಸ್ವತಂತ್ರ ರಕ್ಷಣಾ ಸಚಿವೆ
ರಕ್ಷಣಾ ಖಾತೆಗೆ ಆಯ್ಕೆಯಾಗುವ ಮೂಲಕ ರಕ್ಷಣಾ ಖಾತೆ ನಿಭಾಯಿಸುತ್ತಿರುವ ದೇಶದ ಮೊದಲ ಮಹಿಳೆ ಎಂಬ ಕೀರ್ತಿಗೂ ನಿರ್ಮಲಾ ಸೀತಾರಾಮನ್ ಭಾಜನರಾಗಿದ್ದು, ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಈ ಹೊಣೆಗಾರಿಕೆಯನ್ನು ನಿಭಾಯಿಸಿದ್ದರಾದರೂ, ಪ್ರಧಾನಿ ಹುದ್ದೆಯೊಂದಿಗೆ 1982ರವರೆಗೂ ಖಾತೆ ನಿರ್ವಹಣೆ ಮಾಡಿದ್ದರು. ಹೀಗಾಗಿ ನಿರ್ಮಲಾ ಸೀತಾರಾಮನಾ ಅವರು ದೇಶದ ಮೊದಲ ಸ್ವತಂತ್ರ ರಕ್ಷಣಾ ಸಚಿವೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಅಂತೆಯೇ ರೈಲ್ವೇ ಸಚಿವಾಲಯದ ಜವಾಬ್ದಾರಿಯನ್ನು ಇಂದು ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆದಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆನೀಡಲಾಗಿದ್ದು, ಈ ಹಿಂದೆ ರೈಲುಗಳ ಸರಣಿ ಅಪಘಾತದ ಹಿನ್ನಲೆಯಲ್ಲಿ ಕೇಂದ್ರ  ರೈಲ್ವೇ ಸಚಿವ ಸುರೇಶ್ ಪ್ರಭು ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದರು. ಆದರೆ ಪ್ರಭು ಅವರ ರಾಜಿನಾಮೆ ಅಂಗೀಕರಿಸದ ಪ್ರಧಾನಿ ಮೋದಿ ಸುರೇಶ್ ಪ್ರಭು ಅವರ ಖಾತೆ ಬದಲಾವಣೆ ಮಾಡಿದ್ದಾರೆ. ಪ್ರಸ್ತುತ  ಸುರೇಶ್ ಪ್ರಭು ಅವರಿಗೆ ವಾಣಿಜ್ಯ ಖಾತೆಯ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ನಾನು ದೀರ್ಘಕಾಲದವರೆಗೆ ರಕ್ಷಣಾ ಸಚಿವಾಲಯ ನಿರ್ವಹಣೆ ಮಾಡುವುದಿಲ್ಲ ಎಂದೆನಿಸುತ್ತದೆ ಎಂದು ಹೇಳಿದ್ದರು. ಆ ಮೂಲಕ ರಕ್ಷಣಾ  ಖಾತೆಗೆ ಮತ್ತೋರ್ವ ಸಚಿವರು ಬರಲಿದ್ದಾರೆ ಎಂದು ಸುಳಿವು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!