ಸಂಗ್ರಹ ಚಿತ್ರ 
ದೇಶ

ಇದು ಬಿಜೆಪಿ ಸಂಪುಟ ಪುನಾರಚನೆ: ಪ್ರಧಾನಿ ಮೋದಿಗೆ ಶಿವಸೇನೆ ಟಾಂಗ್!

ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಎನ್ ಡಿಎ ಮೈತ್ರಿ ಪಕ್ಷ ಶಿವಸೇನೆ ಬಹಿಷ್ಕಾರ ಹಾಕಿದ್ದು, ಇದು ಎನ್ ಡಿಎ ಅಲ್ಲ..ಬಿಜೆಪಿ ಸಂಪುಟ ಪುನಾರಚನೆ ಎಂದು ಟೀಕಿಸಿದೆ.

ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಎನ್ ಡಿಎ ಮೈತ್ರಿ ಪಕ್ಷ ಶಿವಸೇನೆ ಬಹಿಷ್ಕಾರ ಹಾಕಿದ್ದು, ಇದು ಎನ್ ಡಿಎ ಅಲ್ಲ..ಬಿಜೆಪಿ ಸಂಪುಟ ಪುನಾರಚನೆ ಎಂದು ಟೀಕಿಸಿದೆ.
ಶಿವಸೇನೆಯ ಸಂಸದರಿಗೆ ಸಚಿವ ಸ್ಥಾನ ನೀಡಲಿಲ್ಲ ಎಂದು ಮುನಿಸಿಕೊಂಡಿರುವ ಉದ್ಧವ್ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ಪುನಾರಚನೆ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇಂದು  ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಶಿವಸೇನೆ ಬಹಿರಂಗವಾಗಿಯೇ ತನ್ನ ಅಸಮಾಧಾನ ವ್ಯಕ್ತಪಡಿಸಿದೆ.  ಅಲ್ಲದೆ ಸಚಿವ ಸಂಪುಟ ಪುನಾರಚನೆ ಕುರಿತಂತೆ ಮೋದಿ ಸರ್ಕಾರ ತಮ್ಮೊಂದಿಗೆ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಅನಂತ್ ಕುಮಾರ್ ಹೆಗಡೆ ಆಯ್ಕೆಗೆ "ಕೈ" ವಿರೋಧ
ಮತ್ತೊಂದೆಡೆ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಆಯ್ಕೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ಆಯ್ಕೆಗೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅನಂತ್  ಕುಮಾರ್ ಹೆಗಡೆ ಮೇಲೆ ಹಲವು ದೂರುಗಳು ದಾಖಲಾಗಿದ್ದು, ಈ ಹಿಂದೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪವನ್ನೂ ಕೂಡ ಅವರು ಎದುರಿಸುತ್ತಿದ್ದಾರೆ. ಇಂತಹ ವ್ಯಕ್ತಿಗೆ ಸಚಿವ ಸ್ಥಾನ ನೀಡಿರುವುದು ಸರಿಯಲ್ಲ ಎಂದು ಕಾಂಗ್ರೆಸ್  ಟೀಕಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!