ಬರೈಲಿ: ಬರೈಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ.
ಮಂಗಳವಾರ ಮಥುರಾಗೆ ತೆರಳುತ್ತಿದ್ದ ವೇಳೆ ರವೀಂದ್ರ ಸಿಂಗ್ ರಾಥೋರ್ ನಾಪತ್ತೆಯಾಗಿದ್ದಾರೆ.
ಅವರನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ,
ಪೊಲೀಸರ ಜೊತೆಗೆ ಕುಟುಂಬ ಸದಸ್ಯರು ಮತ್ತು ರಾಜ್ಯ ಬಿಜೆಪಿ ಮುಖಂಡರು ರಾಥೋರ್ ಪತ್ತೆಗೆ ಪ್ರಯತ್ನಿಸುತ್ತಿದ್ದಾರೆ.
ಆಗ್ರಾ ಮತ್ತು ರಾಜಸ್ತಾನಗಳಲ್ಲಿ ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಸಂಬಂಧ ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ.