ಸಾಂದರ್ಭಿಕ ಚಿತ್ರ 
ದೇಶ

ಆಂಧ್ರಪ್ರದೇಶ: ರಕ್ತ ಚಂದನ ಕಳ್ಳಸಾಗಣೆ ಮಾಡುತ್ತಿದ್ದ ತಮಿಳುನಾಡು ವ್ಯಕ್ತಿಯ ಬಂಧನ

ರಕ್ತ ಚಂದನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ತಮಿಳುನಾಡು ಮೂಲದ ಅಂತರಾಷ್ಟ್ರೀಯ ಸ್ಮಗ್ಲರ್ ನನ್ನು.....

ತಿರುಪತಿ: ರಕ್ತ ಚಂದನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ತಮಿಳುನಾಡು ಮೂಲದ ಅಂತರಾಷ್ಟ್ರೀಯ ಸ್ಮಗ್ಲರ್ ನನ್ನು ಸೋಮವಾರ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಸುಮಾರು 18 ಪ್ರಕರಗಳಲ್ಲಿ ಬೇಕಾಗಿದ್ದ ರಕ್ತ ಚಂದನ ಸ್ಮಗ್ಲರ್ ವಿ ಸುಬ್ರಮಣಿಯನ್ ಅಲಿಯಾಸ್ ಮಣಿಯನ್ನು ಇಂದು ಚಿತ್ತೂರ್ ನಲ್ಲಿ ಆಂಧ್ರ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ 20 ರಕ್ತ ಚಂದನ ತುಂಡುಗಳನ್ನು ಜಪ್ತಿ ಮಾಡಿದ್ದಾರೆ.
ಮಣಿ ಹಾಗೂ ಇತರೆ ಐವರು ಫಾರ್ಚೂನರ್ ಕಾರಿನಲ್ಲಿ ತಲಕೋಣ ಅರಣ್ಯ ಪ್ರದೇಶದಿಂದ ರಕ್ತ ಚಂದನ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಮಣಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇತರೆ ಐವರು ಪರಾರಿಯಾಗಿದ್ದಾರೆ.
ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ತಿರುತಣ್ಣಿ ಮೂಲದ ಮಣಿ 12 ವರ್ಷಗಳ ಹಿಂದೆ ರಕ್ತ ಚಂದನ ಸ್ಮಗ್ಲರ್ ಗಳಿಗೆ ಕಾರ್ಮಿಕರನ್ನು ಒದಗಿಸುತ್ತಿದ್ದ. ನಂತರ ತಾನೇ ಕಾರ್ಯಾಚರಣೆ ನಡೆಸುತ್ತಿದ್ದಾನೆ ಎಂದು ಮದನಪಲ್ಲಿ ಡಿಎಸ್ಪಿ ಕೆ ಚೌಂಡೇಶ್ವರಿ ಅವರು ಹೇಳಿದ್ದಾರೆ.
ಒಂದು ಬಾರಿ ತಮಿಳುನಾಡು ವಿಧಾನಸಭೆಗೆ ಸ್ಪರ್ಧಿಸಿ ಸೋಲು ಅನುಭವಿಸಿರುವ ಮಣಿಯನ್ನು ನಾವು ಇಂದು ಬಂಧಿಸಿದ್ದು, ಇತರೆ ಐವರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)