ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಸೇನಾಪಡೆ, 2 ಉಗ್ರರು ಅಡಗಿರುವ ಶಂಕೆ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ...
ಬಾರಾಮುಲ್ಲಾ (ಜಮ್ಮು-ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾ ಭಾರೀ ಕಾರ್ಯಾಚರಣೆ ನಡೆಸುತ್ತಿದೆ ಎಂದು ಸೋಮವಾರ ತಿಳಿದುಬಂದಿದೆ.
ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನ ಷೇಂಗಗುಂಡ್ ಪ್ರದೇಶ ದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಈ ಹಿನ್ನಲೆಯಲ್ಲಿ ಸೇನಾ ಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆಯಷ್ಟೇ ಜಮ್ಮು ಮತ್ತು ಕಾಶ್ಮೀರರದ ಕುಪ್ವಾರ ಜಿಲ್ಲೆಯ ಚಟ್ಕಾಡಿ ಮತ್ತು ಸಡಿಪೋರಾದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಭಾರತೀಯ ಸೇನಾಪಡೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಇದಕ್ಕೂ ಮುನ್ನ ಕೃಷ್ಣಘಾಟಿ ಸೆಕ್ಟರ್, ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆಯಲ್ಲೂ ಕದನ ವಿರಾಮ ಉಲ್ಲಂಘನೆ ಮಾಡಿತ್ತು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.