ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದಲ ಸೊಪೋರ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು, 2 ಉಗ್ರರನ್ನು ಹೊಡೆದುರುಳಿಸಿದೆ ಎಂದು ಸೋಮವಾರ ತಿಳಿದುಬಂದಿದೆ...

ಸಂಗ್ರಹ ಚಿತ್ರ
Manjula VN
Updated On : 4 Sept 2017, 3:40 am
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ ಸೊಪೋರ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು, 2 ಉಗ್ರರನ್ನು ಹೊಡೆದುರುಳಿಸಿದೆ ಎಂದು ಸೋಮವಾರ ತಿಳಿದುಬಂದಿದೆ. 
ಸೊಪೋರ್ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿರುವ ಕುರಿತಂತೆ ಖಚಿತ ಮಾಹಿತಿ ದೊರಕಿದ ಹಿನ್ನಲೆಯಲ್ಲಿ ಸೇನಾಪಡೆ ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆಗಿಳಿದಿತ್ತು. 
ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಯೋಧರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಕಾಳಗ ನಡೆದಿದ್ದು, ಸೇನಾ ಪಡೆಗಳು ನಡೆಸಿರುವ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಹತರಾಗಿದ್ದಾರೆಂದು ತಿಳಿದುಬಂದಿದೆ. 

Advertisement

Advertisement

ಕಾರ್ಯಾಚರಣೆ ವೇಳೆ ಎಕೆ-47 ಹಾಗೂ ಸ್ಫೋಟಕ ವಸ್ತಿಗಳನ್ನು ಸೇನಾಪಡೆಗಳು ವಶಕ್ಕೆ ಪಡೆದುಕೊಂಡಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement