ಪ್ರಧಾನಮಂತ್ರಿ ನರೇಂದ್ರ ಮೋದಿ
ಮುಜಾಫರ್'ನಗರ; ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಕ್ಷೇಪಾರ್ಹ ಚಿತ್ರವನ್ನು ಬಳಕೆ ಮಾಡಿದ್ದ ಕಾರಣಕ್ಕೆ ಇಬ್ಬರ ವಿರುದ್ಧ ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸರ್ಕಲ್ ಆಫೀಸರ್ ರಾಜೀವ್ ಕುಮಾರ್ ಸಿಂಗ್ ಅವರು, ಪ್ರಧಾನಿ ಮೋದಿಯವರ ಆಕ್ಷೇಪಾರ್ಹ ಚಿತ್ರ ಬಳಕೆ ಮಾಡಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇಬ್ಬರ ವಿರುದ್ದ ಐಪಿಸಿ ಸೆಕ್ಷನ್ 505 (ಸುಳ್ಳು ಸಂದೇಶ ರವಾನಿಸಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವುದು) ಸೇರಿದಂತೆ ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಹಲವು ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿಯವರು ಆಕ್ಷೇಪಾರ್ಹ ಚಿತ್ರಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ನಾಯಕ ಯೋಗೇಂದರ್ ಚೌಧರಿಯವರು ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ.