ಅತ್ತ ಗುಜರಾತ್ ನಲ್ಲಿ ಚುನಾವಣೆಗೆ ತಯಾರಿ, ಇತ್ತ ಕೃತಕ ಬುದ್ಧಿಮತ್ತೆ ಬಗ್ಗೆ ತಿಳಿಯಲು ಯುಎಸ್ ಗೆ ರಾಹುಲ್ ಗಾಂಧಿ!
ಕಾಂಗ್ರೆಸ್ ಪಕ್ಷ ಗುಜರಾತ್ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದರೆ, ಕಾಂಗ್ರೆಸ್ ನ ಉಪಾಧ್ಯಕ್ಷ ರಾಹುಲ್ ಗಾಂಧಿ ಕೃತಕ ಬುದ್ಧಿಮತ್ತೆ ಬಗ್ಗೆ ಹೆಚ್ಚಿನದ್ದನ್ನು ತಿಳಿಯುವುದಕ್ಕಾಗಿ ಅಮೆರಿಕಾ ಪ್ರವಾಸ..
ನವದೆಹಲಿ: ಕಾಂಗ್ರೆಸ್ ಪಕ್ಷ ಗುಜರಾತ್ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದರೆ, ಕಾಂಗ್ರೆಸ್ ನ ಉಪಾಧ್ಯಕ್ಷ ರಾಹುಲ್ ಗಾಂಧಿ ಕೃತಕ ಬುದ್ಧಿಮತ್ತೆ ಬಗ್ಗೆ ಹೆಚ್ಚಿನದ್ದನ್ನು ತಿಳಿಯುವುದಕ್ಕಾಗಿ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ.
ವಾಷಿಂಗ್ ಟನ್ ನಲ್ಲಿರುವ ಸೆಂಟರ್ ಫಾರ್ ಅಮೆರಿಕನ್ ಪ್ರೋಗ್ರೆಸ್ ನ ದುಂಡುಮೇಜಿನ ಸಭೆಯಲ್ಲಿಯೂ ರಾಹುಲ್ ಗಾಂಧಿ ಭಾಗವಹಿಸಲಿದ್ದು, ಸ್ಯಾಮ್ ಪಿತ್ರೋಡಾ ಅವರು ರಾಹುಲ್ ಗಾಂಧಿಗೆ ಸಾಥ್ ನೀಡಲಿದ್ದಾರೆ.
ಇದಷ್ಟೇ ಅಲ್ಲದೇ ಎನ್ಆರ್ ಐ ಗಳು ಹಾಗೂ ವೆಂಚರ್ ಕ್ಯಾಪಿಟಲಿಸ್ಟ್ ಗಳು, ಹೂಡಿಕೆದಾರರು ಹಮ್ಮಿಕೊಂಡಿರುವ ಇತರ ಕಾರ್ಯಕ್ರಮಗಳಲ್ಲಿಯೂ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.