ನವದೆಹಲಿ: ಪಾಕಿಸ್ತಾನದ ಮುಖವಾಡ ಬಯಲು ಮಾಡಲು 9ನೇ ಬ್ರಿಕ್ಸ್ ಸಮಾವೇಶ ಉತ್ತಮ ಅವಕಾಶವಾಗಿದೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ.
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಮೀಮ್ ಅಫ್ಜಲ್, ಪಾಕಿಸ್ತಾನದ ಭಯೋತ್ಪಾದನಾ ಕೃತ್ಯಗಳ ವಿರುದ್ಧ ಬ್ರಿಕ್ಸ್ ರಾಷ್ಟ್ರಗಳು ಉತ್ತಮ ಕ್ರಮಗಳನ್ನು ಕೈಗೊಂಡಿದೆ ಎಂದು ನಂಬಿದ್ದೇವೆ. ಒಂದು ವೇಳೆ ಈ ರಾಷ್ಟ್ರಗಳು ಒಗ್ಗೂಡಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ಹಾಗೂ ಭಯೋತ್ಪದಾನೆ ವಿರುದ್ಧ ಕೆಲಸ ಮಾಡಿದ್ದೇ ಆದರೆ, ಪಾಕಿಸ್ತಾನದ ಮುಖವಾಡ ಬಯಲಾಗಲಿದೆ ಎಂದು ಹೇಳಿದ್ದಾರೆ.
ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುವವಲ್ಲಿ ಚೀನಾ ರಾಷ್ಟ್ರ ಪ್ರಮುಖ ಪಾತ್ರವಹಿಸುತ್ತದೆ. ಬ್ರಿಕ್ಸ್ ರಾಷ್ಟ್ರಗಳು ಭಯೋತ್ಪಾದನೆ ವಿರುದ್ಧ ದನಿಗೂಡಿಸಿದ್ದು ಮುಂದಿನ ದಿನಗಳಲ್ಲಿ ಚೀನಾ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂಬುದು ಮುಖ್ಯವಾಗುತ್ತೆ. ಭಯೋತ್ಪಾದನೆ ಕುರಿತಂತೆ ಪಾಕಿಸ್ತಾನದ ಮೇಲೆ ಚೀನಾ ಒತ್ತಡ ಹೇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದ್ದಾರೆ.