ಸಿರ್ಸಾದ ಡೇರಾ ಸಚ್ಚಾ ಸೌದ ಆಶ್ರಮ 
ದೇಶ

ಸಿರ್ಸಾದ ಡೇರಾ ಸಚ್ಚಾ ಸೌದ ಆಶ್ರಮ ಶೋಧಿಸಲು ಹರಿಯಾಣ ಪೊಲೀಸರಿಗೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಬಾ ರಾಮ್ ರಹೀಮ್ ಗುರ್ಮೀತ್ ಸಿಂಗ್ ರ ಸಿರ್ಸಾದಲ್ಲಿರುವ ಡೇರಾ ಸಚ್ಚಾ ಸೌದಾದ....

ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಬಾ ರಾಮ್ ರಹೀಮ್ ಗುರ್ಮೀತ್ ಸಿಂಗ್ ರ ಸಿರ್ಸಾದಲ್ಲಿರುವ ಡೇರಾ ಸಚ್ಚಾ ಸೌದಾದ ಆಶ್ರಮವನ್ನು ಶೋಧಿಸಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ. ಅಲ್ಲದೇ ನಿವೃತ್ತ ನ್ಯಾಯಾಧೀಶ ಕೆಎಸ್ ಪವಾರ್ ಅವರನ್ನು ಕೋರ್ಟ್ ಕಮಿಷನರ್ ಆಗಿ ನೇಮಕ ಮಾಡಿ, ಅವರ ಮೇಲ್ವಿಚಾರಣೆಯಲ್ಲಿ ಶೋಧ ಕಾರ್ಯ ನಡೆಸುವಂತೆ ಸೂಚನೆ ನೀಡಿದೆ.
ಕೋರ್ಟ್ ಕಮಿಷನರ್ ನೇತೃತ್ವದಲ್ಲಿಯೇ ಡೇರಾ ಸಚ್ಚಾ ಸೌದವನ್ನು ಶೋಧಿಸುವುದು ಅಗತ್ಯವಾಗಿದೆ. ಬಳಿಕ ಕೆಎಸ್ ಪವಾರ್ ಅವರು ಹೈಕೋರ್ಟ್ ಗೆ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಬೇಕೆಂದು ಕೋರ್ಟ್ ನಿರ್ದೇಶನ ನೀಡಿದೆ.
ಹೈಕೋರ್ಟ್ ಆದೇಶದ ನಂತರ ಪೊಲೀಸರು ಸ್ವ್ಯಾಟ್ ಮತ್ತು ಬಾಂಬ್ ತಪಾಸಣಾ ತಂಡವನ್ನು ಸಿದ್ಧತೆ ಮಾಡಿಕೊಂಡು ಸಿರ್ಸಾ ಪ್ರಧಾನ ಆಶ್ರಮದೊಳಗೆ ಶೋಧ ಕಾರ್ಯಾಚರಣೆ ನಡೆಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಸೋಮವಾರ ಹರಿಯಾಣ ಪೊಲೀಸರು ಸಿರ್ಸಾದಲ್ಲಿರುವ ಡೇರಾ ಆಶ್ರಮದಲ್ಲಿ ಅಪಾರ ಪ್ರಮಾಣದ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT