ನವದೆಹಲಿ: ಕೇಂದ್ರ ಸಚಿವ ಅರುಣ್ ಜೇಟ್ಲಿ ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಲಾಗಿದ್ದ ನೋಟಿಸ್'ಗೆ ಉತ್ತರಿಸಲು ವಿಳಂಬ ಮಾಡಿದ್ದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಹೈಕೋರ್ಟ್ ರೂ.5000 ದಂಡ ವಿಧಿಸಿದೆ.
ಪ್ರಕರಣವೊಂದರ ವಿಚಾರಣೆ ವೇಳೆ ಕೇಜ್ರಿವಾಲ್ ಅವರ ಪರ ವಕೀಲ ಜೇಠ್ಮಲಾನಿಯವರು ತಮ್ಮ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಾರೆಂದು ಹೇಳಿ ಅರುಣ್ ಜೇಟ್ಲಿಯವರು ಕೇಜ್ರಿವಾಲ್ ವಿರುದ್ಧ ರೂ.10 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದರು.
ಈ ಕುರಿತು ಉತ್ತರ ನೀಡುವಂತೆ ಕೇಜ್ರಿವಾಲ್ ಅವರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿತ್ತು. ಆದರೆ, ನಿಗದಿತ ಅವಧಿ ಬಳಿಕ ಉತ್ತರ ಸಲ್ಲಿಸಿದ್ದ ಹಿನ್ನಲೆಯಲ್ಲಿ ನ್ಯಾಯಾಲಯದ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ರೂ.5000 ದಂಡ ವಿಧಿಸಿದೆ ಎಂದು ತಿಳಿದುಬಂದಿದೆ.