ಕೋಲ್ಕತ್ತಾ: ಕೋಲ್ಕತ್ತಾದ ಸರ್ಕಾರಿ ಆಡಿಟೋರಿಯಂ ನಲ್ಲಿ ನಡೆಯಬೇಕಿದ್ದ ಆರ್ ಎಸ್ಎಸ್ ಕಾರ್ಯಕ್ರಮವನ್ನು ಒತ್ತಾಯಪೂರ್ವಕವಾಗಿ ರದ್ದುಗೊಳಿಸಿದ ಬೆನ್ನಲ್ಲೇ ರ್ಯಾಲಿಯೊಂದರಲ್ಲಿ ಭಾಗವಹಿಸಬೇಕಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರಿಗೂ ಅನುಮತಿ ನಿರಾಕರಿಸಲಾಗಿದೆ.
ಆರ್ ಎಸ್ಎಸ್ ಮುಖಂಡ ಮೋಹನ್ ಭಾಗ್ವತ್ ಅವರಿಗೆ ಅನುಮತಿ ನಿರಾಕರಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮುಂದಿನ ವಾರ ಪಕ್ಷದ ಪ್ರಮುಖ ರ್ಯಾಲಿಯೊಂದರಲ್ಲಿ ಭಾಗಿಯಾಗಬೇಕಿತ್ತು. ನೇತಾಜಿ ಇಂಡೋರ್ ಸ್ಟೇಡಿಯಂ ನಲ್ಲಿ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಿದ್ದ ಬಿಜೆಪಿ ಸೆ.10 ಅಥವಾ 13 ಕ್ಕೆ ಸ್ಥಳವನ್ನು ಕಾಯ್ದಿರಿಸಲು ಕೇಳಿತ್ತು. ಸುಮಾರು 12,000 ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇತ್ತು. ಆದರೆ ಸೆಪ್ಟೆಂಬರ್ ತಿಂಗಳಲ್ಲಿ 27-30 ರಂದು ಹೊರತುಪಡಿಸಿ ಎಲ್ಲಾ ದಿನಾಂಕಗಳಲ್ಲಿಯೂ ಕಾರ್ಯಕ್ರಮ ನಿಗದಿಯಾಗಿದೆ ಎಂಬ ಉತ್ತರ ದೊರೆತಿದೆ.
ಮೋಹನ್ ಭಾಗ್ವತ್ ಹಾಗೂ ಅಮಿತ್ ಷಾ ಅವರಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics