ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಕೋಲ್ಕತಾ: ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ತೀವ್ರವಾಗಿ ಖಂಡಿಸಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಹತ್ಯೆ ಪ್ರಕರಣ ಅತ್ಯಂತ ದುರಾದೃಷ್ಟಕರ. ದೇಶದಲ್ಲಿ ತುಂಬಾ ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ ನ್ಯಾಯ ಬೇಕು ಎಂದು ಅಗ್ರಹಿಸಿದ್ದಾರೆ.
ಎಡಪಂಧೀಯ ವಿಚಾರಗಳ ಪರ ವಕಾಲತ್ತು ವಹಿಸುತ್ತಿದ್ದ ಹಾಗೂ ನಕ್ಸಲೀಯರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕ ಕಂಡ ಅಪರೂಪದ ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಗೌರಿ ಲಂಕೇಶ್ ಅವರನ್ನು ದುಷ್ಕರ್ಮಿಗಳ ತಂಡವೊಂದು ಬೆಂಗಳೂರಿನ ರಾಜರಾಜೇಶ್ವರಿ ನಗರಲ್ಲಿರುವ ಅವರದ್ದೇ ನಿವಾಸದಲ್ಲಿ ನಿನ್ನೆ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿತ್ತು.