ರಾಕಿ ಯಾದವ್ 
ದೇಶ

ಓವರ್​ಟೇಕ್ ಮಾಡಿದ್ದಕ್ಕೆ ಯುವಕನ ಹತ್ಯೆ: ರಾಕಿಗೆ ಜೀವಾವಧಿ, ತಂದೆ ಬಿಂದಿ ಯಾದವ್ ಗೆ 5 ವರ್ಷ ಜೈಲು

ಕಾರು ಓವರ್​ಟೇಕ್ ಮಾಡಿದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಜೆಡಿಯುನಿಂದ ಅಮಾನತುಗೊಂಡ ಎಂಎಲ್ ಸಿ....

ಗಯಾ: ಕಾರು ಓವರ್​ಟೇಕ್ ಮಾಡಿದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಜೆಡಿಯುನಿಂದ ಅಮಾನತುಗೊಂಡ ಎಂಎಲ್ ಸಿ ಮನೋರಮಾ ದೇವಿ ಪುತ್ರ ರಾಕಿ ಯಾದವ್ ಹಾಗೂ ಇತರೆ ಇಬ್ಬರಿಗೆ ಜೀವಾವಧಿ ಶಿಕ್ಷೆ ಮತ್ತು ಅಪರಾಧಿಯನ್ನು ರಕ್ಷಿಸಿದ ತಂದೆ ಬಿಂದಿ ಯಾದವ್ ಗೆ ಗಯಾ ಜಿಲ್ಲಾ ಕೋರ್ಟ್ ಐದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಕಳೆದ ಆಗಸ್ಟ್ 31ರಂದು ರಾಕಿ ಯಾದವ್ ಮತ್ತು ಇತರೆ ಮೂವರು ತಪ್ಪಿತಸ್ಥರು ಎಂದು ತೀರ್ಪು ನೀಡಿದ್ದ  ಜಿಲ್ಲಾ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು. 
ಕಳೆದ ವರ್ಷ ಮೇ 7ರಂದು ಕಾರು ಓವರ್ ಟೇಕ್ ಮಾಡಿದ ಪಿಯುಸಿ ವಿದ್ಯಾರ್ಥಿ ಅದಿತ್ಯ ಸಚ್ ದೇವ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದ ತ್ವರಿತ ವಿಚಾರಣೆ ನಡೆಸಿದ ಕೋರ್ಟ್ ನಾಲ್ವರು ಅಪರಾಧಿಗಳಿಗೆ ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ವ್ಯಾಪಾರಿಯೊಬ್ಬರ ಪುತ್ರ ಆದಿತ್ಯ ಸಚ್​ದೇವ್ ಹಾಗೂ ಸ್ನೆಹಿತರನ್ನು ಒಳಗೊಂಡ ಸ್ವಿಪ್ಟ್ ಕಾರು ಶಾಸಕಿಯ ಪುತ್ರ ರಾಕಿಯ ಎಸ್​ಯುವಿ ಕಾರನ್ನು ಓವರ್ ಟೇಕ್ ಮಾಡಿದ ಹಿನ್ನೆಲೆಯಲ್ಲಿ ಉಭಯರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಆವೇಶಕ್ಕೆ ಒಳಗಾದ ರಾಕಿ ತನ್ನ ಬಳಿ ಇದ್ದ ಪಿಸ್ತೂಲಿನಿಂದ ಆದಿತ್ಯಾಗೆ ಗುಂಡಿಟ್ಟು ಹತ್ಯೆ ಮಾಡಿದ್ದರು. ಈ ಸಂಬಂಧ ಮೇ 11, 2016ರಲ್ಲಿ ರಾಕಿ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದರು.
ವಿಚಾರಣೆ ವೇಳೆ ರಾಕಿ ಯಾದವ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದ. ಅಲ್ಲದೆ ವಿಧಿವಿಜ್ಞಾನ ವರದಿಯಲ್ಲಿ ರಾಕಿ ಯಾದವ್ ಗನ್​ನಿಂದ ಹಾರಿದ ಬುಲೆಟ್​ನಿಂದ ಆದಿತ್ಯ ಸಚ್​ದೇವ್ ಸಾವು ಸಂಭವಿಸಿದೆ ಎಂಬುದು ಬಹಿರಂಗಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT